ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಬಿಎಂಪಿಯ 198 ವಾರ್ಡ್‌ಗಳ ಚುನಾವಣೆಗೆ ಹೈಕೋರ್ಟ್‌ ಅಸ್ತು

Last Updated 4 ಡಿಸೆಂಬರ್ 2020, 12:18 IST
ಅಕ್ಷರ ಗಾತ್ರ

ಬೆಂಗಳೂರು: ಬಿಬಿಎಂಪಿಯ 198 ವಾರ್ಡ್‌ಗಳ ಚುನಾವಣೆ ಘೋಷಣೆ ಮಾಡುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಹೈಕೋರ್ಟ್ ಆದೇಶಿಸಿದೆ. ಮೀಸಲಾತಿಯ ಅಂತಿಮ ಅಧಿಸೂಚನೆ ಪ್ರಕಟವಾದ ನಂತರ ಆರು ವಾರಗಳಲ್ಲಿ ಚುನಾವಣೆ ವೇಳಾ‍ಪಟ್ಟಿ ಪ್ರಕಟಿಸುವಂತೆ ತಿಳಿಸಿದೆ.

ಈ ಹಿಂದಿನ ಅವಧಿ ಪಾಲಿಕೆ ಸದಸ್ಯರಾಗಿದ್ದ ಎಂ. ಶಿವರಾಜ್ ಮತ್ತು ಅಬ್ದುಲ್ ವಾಜೀದ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಈ ಆದೇಶ ನೀಡಿದೆ.

ಕೆಎಂಸಿ ಕಾಯ್ದೆಯ ತಿದ್ದುಪಡಿ ಮಾನ್ಯವಾಗಿದ್ದರೂ, ಅಕ್ಟೋಬರ್ 3ರ ನಂತರ ಅವಧಿ ಮುಗಿದ ಸ್ಥಳೀಯ ಸಂಸ್ಥೆಗಳಿಗೆ ಮಾತ್ರ ಇದು ಅನ್ವಯವಾಗಲಿದೆ ಎಂದು ಪೀಠ ಹೇಳಿದೆ. ಬಿಬಿಎಂಪಿ ಅವಧಿ ಸೆಪ್ಟೆಂಬರ್‌ನಲ್ಲಿ ಮುಗಿದಿರುವ ಕಾರಣ ಪಾಲಿಕೆ ಚುನಾವಣೆಗೆ ಅನ್ವಯವಾಗುವುದಿಲ್ಲ.

ಸದ್ಯ 198 ವಾರ್ಡ್‌ಗಳಿದ್ದು, ಅದನ್ನು 243ಕ್ಕೆ ಹೆಚ್ಚಿಸಲು ರಾಜ್ಯ ಸರ್ಕಾರ ಕೆಎಂಸಿ ಕಾಯ್ದೆಗೆ ತಿದ್ದುಪಡಿ ತಂದಿತ್ತು. ಈ ತಿದ್ದುಪಡಿ ಬಿಬಿಎಂಪಿ ಈ ಬಾರಿಯ ಚುನಾವಣೆಗೆ ಅನ್ವಯವಾಗಿದ್ದರೆ ಚುನಾವಣೆ ವಿಳಂಬವಾಗುವ ಸಾಧ್ಯತೆ ಇತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT