ಮಂಗಳವಾರ, ಜೂನ್ 28, 2022
21 °C

KPSC: 362 ಅಭ್ಯರ್ಥಿಗಳ ನೇಮಕಾತಿ ಸಿಂಧು –ಕಾಯ್ದೆ ಪ್ರಶ್ನಿಸಿದ್ದ ಪಿಐಎಲ್ ವಜಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: 2011ನೇ ಸಾಲಿನ 362 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ನೇಮಕಾತಿ ಸಿಂಧುಗೊಳಿಸಿ ಅವರಿಗೆ ನೇಮಕಾತಿ ಆದೇಶ ನೀಡಲು ತರಲಾದ ಕಾಯ್ದೆಯನ್ನು ಪ್ರಶ್ನಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಹೈಕೋರ್ಟ್ ವಜಾಗೊಳಿಸಿದೆ.

ಈ ಕುರಿತಂತೆ ಸಾಮಾಜಿಕ ಕಾರ್ಯಕರ್ತ ಅರೀಫ್ ಜಮಾಲ್ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

'ಈಗಾಗಲೇ 2011ನೇ ಸಾಲಿನ ನೇಮಕಾತಿಯನ್ನು ಹೈಕೋರ್ಟ್ ಈ ಹಿಂದೆ ರದ್ದುಪಡಿಸಿದೆ ಎಂಬ ಹಿನ್ನೆಲೆಯಲ್ಲಿ ಇಡೀ ಕಾಯ್ದೆಯನ್ನು ಅಸಾಂವಿಧಾನಿಕ ಎನ್ನಲಾಗದು.‌ ಕಾಯ್ದೆಯಲ್ಲಿ ಯಾವ ನಿಯಮಗಳು ಅಸಾಂವಿಧಾನಿಕ ಎಂಬುದನ್ನು ಅರ್ಜಿದಾರರು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡುವಲ್ಲಿ ವಿಫಲರಾಗಿದ್ದಾರೆ' ಎಂದು ಅಭಿಪ್ರಾಯಪಟ್ಟ ನ್ಯಾಯಪೀಠ, ಅರ್ಜಿ ವಜಾಗೊಳಿಸಿ ಆದೇಶಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು