ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣೆ ವೇಳೆ ಸೀರೆ, ಕುಕ್ಕರ್‌ ಹಂಚಿಕೆ: ಹೈಕೋರ್ಟ್ ಕಳವಳ

Last Updated 14 ಫೆಬ್ರುವರಿ 2023, 15:40 IST
ಅಕ್ಷರ ಗಾತ್ರ

ಬೆಂಗಳೂರು: ‘ಚುನಾವಣೆ ಹತ್ತಿರ ಬರುತ್ತಿರುವ ಹಿನ್ನೆಲೆಯಲ್ಲಿ ಮತದಾರರಿಗೆ ಸೀರೆ, ಕುಕ್ಕರ್‌, ಮಿಕ್ಸಿಗಳನ್ನು ಹಂಚಲಾಗುತ್ತಿದೆ‘ ಎಂಬ ಮಾಧ್ಯಮ ವರದಿಗಳನ್ನು ಪ್ರಕರಣವೊಂದರ ವಿಚಾರಣೆ ವೇಳೆ ಮೆಲುಕು ಹಾಕಿರುವ ಹೈಕೋರ್ಟ್, ‘ಇದೆಂತಹ ಚುನಾವಣೆ’ ಎಂದು ಕಳವಳ ವ್ಯಕ್ತಪಡಿಸಿದೆ.

‘ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕ ಡಿ.ಸಿ. ಗೌರಿಶಂಕರ್‌ ಆಯ್ಕೆಯನ್ನು ಅಸಿಂಧುಗೊಳಿಸಬೇಕು‘ ಎಂದು ಕೋರಿ ಪರಾಜಿತ ಬಿಜೆಪಿ ಅಭ್ಯರ್ಥಿ ಬಿ.ಸುರೇಶ್ ಗೌಡ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಸ್‌.ಸುನಿಲ್‌ ದತ್ ಯಾದವ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ಮುಂದುವರೆಸಿತು.

ವಿಚಾರಣೆ ವೇಳೆ ಬರಲಿರುವ ವಿಧಾನಸಭಾ ಚುನಾವಣೆಗೆ ಕೆಲವೆಡೆ ಸಂಭಾವ್ಯ ಮತ್ತು ಅಪೇಕ್ಷಿತ ಅಭ್ಯರ್ಥಿಗಳು ಮತದಾರರಿಗೆ ಆಮಿಷ ಒಡ್ಡುತ್ತಿರುದ್ದಾರೆ ಎಂಬ ವರದಿಗಳನ್ನು ಮೌಖಿಕವಾಗಿ ಪ್ರಸ್ತಾಪಿಸಿದ ನ್ಯಾಯಮೂರ್ತಿಗಳು, ‘ಈಗಿನ ಪರಿಸ್ಥಿತಿಯಲ್ಲಿ ಒಂದು ಕ್ಷೇತ್ರದ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಯೊಬ್ಬ ಕನಿಷ್ಠ ₹ 25 ಕೋಟಿ ಖರ್ಚು ಮಾಡಬೇಕು ಎಂಬಂತಹ ಪರಿಸ್ಥಿತಿ ಇದೆ. ಕಲುಷಿತಗೊಂಡಿರುವ ಈ ವ್ಯವಸ್ಥೆಯನ್ನು ಸುಗುಮಗೊಳಿಸುವುದು ಹೇಗೆ‘ ಎಂದು ಪ್ರಶ್ನಿಸಿತು.

‘ಚುನಾವಣೆಗೆ ಅಭ್ಯರ್ಥಿ ಎಂದು ಘೋಷಿಸಿದ ಬಳಿಕವೇ ಆತನ ಭ್ರಷ್ಟಾಚಾರಗಳ ಬಗ್ಗೆ ಕ್ರಮ ಕೈಗೊಳ್ಳಲು ಕಾನೂನಿಲ್ಲಿ ಅವಕಾಶವಿದೆ. ಆದರೆ, ಹೀಗೆ ಚುನಾವಣೆಗೂ ಮುನ್ನವೇ ಆಮಿಷ ಒಡ್ಡುವ ಭ್ರಷ್ಟಾಚಾರವನ್ನು ಯಾವ ಕಾನೂನು ಮೂಲಕ ನಿಯಂತ್ರಿಸಬೇಕು‘ ಎಂಬ ಜಿಜ್ಞಾಸೆಯನ್ನು ನ್ಯಾಯಪೀಠ ವ್ಯಕ್ತಪಡಿಸಿತು.

ಇದಕ್ಕೆ ಗೌರಿಶಂಕರ್ ಪರ ವಕೀಲ ಆರ್.ಹೇಮಂತ ರಾಜ್‌, ‘ಎಲ್ಲ ಕ್ಷೇತ್ರಗಳಲ್ಲೂ ಭ್ರಷ್ಟಾಚಾರ ವ್ಯಾಪಕವಾಗಿದೆ. ಪ್ರಜಾಪ್ರಭುತ್ವದಲ್ಲಿ ಕ್ರಾಂತಿಕಾರಕ ಬದಲಾವಣೆಯಿಂದ ಮಾತ್ರವೇ ಇಂತಹುದನ್ನೆಲ್ಲಾ ನಿಯಂತ್ರಿಸಲು ಸಾಧ್ಯ’ ಎಂದು ನ್ಯಾಯಪೀಠದ ಕಳವಳಕ್ಕೆ ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT