ಭಾನುವಾರ, ಮಾರ್ಚ್ 26, 2023
24 °C

ಹೈಕೋರ್ಟ್‌ಗೆ: ಮೂವರು ನ್ಯಾಯಮೂರ್ತಿಗಳ ನೇಮಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವಕೀಲರಾದ ಅನಂತ ರಾಮನಾಥ್ ಹೆಗಡೆ, ಎಸ್.ರಾಚಯ್ಯ ಮತ್ತು ಕೆ.ಎಸ್.ಹೇಮಲೇಖಾ ಅವರನ್ನು ಹೈಕೋರ್ಟ್‌ ಹೆಚ್ಚುವರಿ ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಲಾಗಿದೆ.

ಹೈಕೋರ್ಟ್‌ನಲ್ಲಿ ಮಂಜೂರಾದ 62 ನ್ಯಾಯಮೂರ್ತಿ ಹುದ್ದೆಗಳಿದ್ದು, ಸದ್ಯ 43 ನ್ಯಾಯಮೂರ್ತಿಗಳಿದ್ದರು. ಮೂವರನ್ನು ಹೊಸದಾಗಿ ನೇಮಿಸಿರುವುದರಿಂದ ಈ ಸಂಖ್ಯೆ 46ಕ್ಕೆ ಏರಿಕೆಯಾಗಿದೆ. ಅಧಿಕಾರ ಸ್ವೀಕರಿಸಿದ ದಿನದಿಂದ ಎರಡು ವರ್ಷಗಳ ಅವಧಿಗೆ ನ್ಯಾಯಮೂರ್ತಿಗಳನ್ನು ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಈ ಮೂವರ ನೇಮಕಕ್ಕೆ ಸುಪ್ರೀಂ ಕೋರ್ಟ್‌ ಕೊಲಿಜಿಯಂ ಈ ಹಿಂದೆ ಶಿಫಾರಸು ಮಾಡಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.