ಗುರುವಾರ , ಮಾರ್ಚ್ 30, 2023
32 °C

ಹೈಕೋರ್ಟ್: ಮೂವರು ನೂತನ ನ್ಯಾಯಮೂರ್ತಿಗಳ ಪ್ರಮಾಣ ವಚನ ಸ್ವೀಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಅನಂತ ರಾಮನಾಥ ಹೆಗಡೆ, ಎಸ್.ರಾಚಯ್ಯ ಹಾಗೂ ಕೆ.ಎಸ್.ಹೇಮಲೇಖಾ ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು.

ಬೆಳಗ್ಗೆ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ನೂತನ ನ್ಯಾಯಮೂರ್ತಿಗಳಿಗೆ ಪ್ರಮಾಣ ವಚನ ಬೋಧಿಸಿದರು.

Koo App
ಇಂದು ರಾಜಭವನದಲ್ಲಿ ನಡೆದ ಕರ್ನಾಟಕ ಉಚ್ಛ ನ್ಯಾಯಾಲಯದ ಹೆಚ್ಚುವರಿ ನ್ಯಾಯಮೂರ್ತಿಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಲಾಯಿತು. ಶ್ರೀ ಅನಂತ ಪದ್ಮನಾಭ ಹೆಗಡೆ, ಶ್ರೀ ಸಿದ್ಧಯ್ಯ ರಾಚಯ್ಯ ಹಾಗೂ ಶ್ರೀಮತಿ ಕನ್ನನ್ ಕುಯಿಲ್ ಶ್ರೀಧರನ್ ಹೇಮಲೇಖಾ ಅವರು ರಾಜ್ಯದ ಉಚ್ಛ ನ್ಯಾಯಾಲಯದ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಪ್ರಮಾಣವಚನ ಸ್ವೀಕರಿಸಿದರು. ಮಾನ್ಯ ರಾಜ್ಯಪಾಲರಾದ ಶ್ರೀ ಥಾವರಚಂದ್ ಗೆಹ್ಲೋಟ್ ಅವರು ಪ್ರಮಾಣವಚನ ಬೋಧಿಸಿದರು.

- Basavaraj Bommai (@bsbommai) 8 Nov 2021

ರಾಜ್ಯ ಹೈಕೋರ್ಟ್‌ ನ್ಯಾಯಮೂರ್ತಿಗಳ ಮಂಜೂರಾತಿ ಸಂಖ್ಯೆ 62. ಹಾಲಿ 43 ನ್ಯಾಯಮೂರ್ತಿಗಳು ಕಾರ್ಯ ನಿರ್ವಹಿಸುತ್ತಿದ್ದು, ನೂತನ ಹೆಚ್ಚುವರಿ ನ್ಯಾಯಮೂರ್ತಿಗಳ ಸೇರ್ಪಡೆಯಿಂದಾಗಿ ಈ ಸಂಖ್ಯೆ ಈಗ 46ಕ್ಕೆ ಏರಿದೆ. 

ಮುಂದಿನ ತಿಂಗಳ, ಡಿಸೆಂಬರ್ 3ಕ್ಕೆ ನ್ಯಾಯಮೂರ್ತಿ ಎನ್.ಕೆ. ಸುಧೀಂದ್ರರಾವ್ ಅವರು ನಿವೃತ್ತರಾಗಲಿದ್ದಾರೆ.

ಸಮಾರಂಭದಲ್ಲಿ ಹೈಕೋರ್ಟ್ ನ್ಯಾಯಮೂರ್ತಿಗಳು, ಹಿರಿಯ ವಕೀಲರು, ರಾಜ್ಯ ವಕೀಲರ ಪರಿಷತ್ ಅಧ್ಯಕ್ಷ ಎಲ್.ಶ್ರೀನಿವಾಸ್ ಬಾಬು, ಸದಸ್ಯರು, ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ಎ.ಪಿ.ರಂಗನಾಥ್, ಪ್ರಧಾನ ಕಾರ್ಯದರ್ಶಿ ಎ.ಎನ್‌.ಗಂಗಾಧರಯ್ಯ ಖಜಾಂಚಿ ಶಿವಮೂರ್ತಿ ಹಾಗೂ ವಕೀಲ ವೃಂದದ ಗಣ್ಯರು ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು