ಬೆಂಗಳೂರು:ನಗರ ಪ್ರದೇಶಗಳಲ್ಲಿ ಸಾರ್ವಜನಿಕ ಶೌಚಾಲಯಗಳು ಸಮರ್ಪಕವಾಗಿ ಇವೆಯೇ ಎಂಬುದರ ಕುರಿತು ವರದಿ ಸಲ್ಲಿಸುವಂತೆ ಬಿಬಿಎಂಪಿ ಹಾಗೂ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಸಾರ್ವಜನಿಕರ ಖಾಸಗಿತನ ಕಾಪಾಡುವುದು ನಗರ ಸ್ಥಳೀಯ ಸಂಸ್ಥೆಗಳ ಜವಾಬ್ದಾರಿ. ಈ ಸಂಬಂಧ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಿಗೆ ನಿರ್ದೇಶನ ನೀಡಬೇಕು ಎಂದು ತಿಳಿಸಿದೆ.

ಲಿಟ್ಜ್ಕಿಟ್ ಸಂಸ್ಥೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್. ಕಿಣಗಿ ಅವರಿದ್ದ ವಿಭಾಗೀಯ ಪೀಠ, ‘ವಿಶೇಷವಾಗಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಎಷ್ಟು ಸಾರ್ವಜನಿಕ ಶೌಚಾಲಯಗಳಿವೆ.ಇನ್ನೂ ಎಷ್ಟು ಶೌಚಾಲಯಗಳ ಅಗತ್ಯವಿದೆ ಎಂಬುದನ್ನು ತಿಳಿದುಕೊಳ್ಳುವ ಪ್ರಯತ್ನ ನಡೆದಿದೆಯೇ’ ಎಂದು ಕೇಳಿತು.

ಮಹಿಳೆಯರ ಖಾಸಗಿತನ ಕಾಪಾಡಲು ಏನೇನು ಕ್ರಮ ಕೈಗೊಳ್ಳಲಾಗಿದೆ. ಮಾರುಕಟ್ಟೆಗಳು, ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಇರುವ ಸ್ಥಳಗಳಲ್ಲಿ ಕೆಎಂಸಿ ಕಾಯ್ದೆ ಪ್ರಕಾರ ಶೌಚಾಲಯ ಸೌಲಭ್ಯ ಒದಗಿಸಿರುವ ಬಗ್ಗೆ ಅಫಿಡವಿಟ್ ಸಲ್ಲಿಸುವಂತೆ ನಿರ್ದೇಶನ ನೀಡಿತು.

‘ಆರೋಗ್ಯಕರ ಸಾರ್ವಜನಿಕ ಶೌಚಾಲಯಗಳನ್ನು ಒದಗಿಸುವಲ್ಲಿ ಸ್ಥಳೀಯ ಸಂಸ್ಥೆಗಳು ನಿಷ್ಕ್ರಿಯವಾಗಿವೆ. ಕರ್ನಾಟಕ ಮಹಾನಗರ ಪಾಲಿಕೆ (ಕೆಎಂಸಿ) ಕಾಯ್ದೆಯನ್ನು ಪಾಲಿಸುತ್ತಿಲ್ಲ. ಮಾರ್ಗಸೂಚಿಗಳ ಪ್ರಕಾರ ಅಗತ್ಯ ಇರಬೇಕಿದ್ದ ಪ್ರಮಾಣದಲ್ಲಿ ಶೇ 50ರಷ್ಟು ಶೌಚಾಲಯಗಳೂ ಬೆಂಗಳೂರಿನಲ್ಲಿ ಇಲ್ಲ’ ಎಂದು ಅರ್ಜಿ ಸಲ್ಲಿಸಿರುವ ಸಂಸ್ಥೆ ಆರೋಪಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.