ಶುಕ್ರವಾರ, 4 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಯುಎಪಿಎ ಇತರರಿಗೂ ಅನ್ವಯ: ಹೈಕೋರ್ಟ್

Published : 5 ಜುಲೈ 2022, 20:06 IST
ಫಾಲೋ ಮಾಡಿ
Comments

ಬೆಂಗಳೂರು: 'ಕಾನೂನು ಬಾಹಿರ ಚಟುವಟಿಕೆ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಸದಸ್ಯರನ್ನು ಮಾತ್ರ ವಿಚಾರಣೆ ನಡೆಸಬೇಕೆಂದೇನೂ ಇಲ್ಲ; ಭಯೋತ್ಪಾದಕ ಕೃತ್ಯವೆಸಗಿದ ಯಾವುದೇ ವ್ಯಕ್ತಿಯನ್ನೂ ವಿಚಾರಣೆಗೆ ಒಳಪಡಿಸಬಹುದು' ಎಂದು ಹೈಕೋರ್ಟ್ ಆದೇಶಿಸಿದೆ.

ಆರ್‌ಎಸ್‌ಎಸ್ ಕಾರ್ಯಕರ್ತ ರುದ್ರೇಶ್ ಕೊಲೆ ಪ್ರಕರಣದಲ್ಲಿ ಜಾಮೀನು ಕೋರಿ ಆರೋಪಿಗಳಾದ ಇರ್ಫಾನ್ ಪಾಷಾ ಹಾಗೂ ಮೊಹಮ್ಮದ್ ಮುಜೀಬ್ ಉಲ್ಲಾ ಸಲ್ಲಿಸಿದ್ದ ಕ್ರಿಮಿನಲ್ ಮೇಲ್ಮನವಿಗಳನ್ನು ವಜಾಗೊಳಿಸಿರುವ ಹೈಕೋರ್ಟ್ ಈ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ. ಸೋಮಶೇಖರ್ ಹಾಗೂ ನ್ಯಾಯಮೂರ್ತಿ ಶಿವಶಂಕರ ಅಮರಣ್ಣವರ ಅವರಿದ್ದ ವಿಭಾಗೀಯ ನ್ಯಾಯಪೀಠ, 'ಎನ್ಐಎ ವಿಶೇಷ ಕೋರ್ಟ್ ಆದೇಶ ರದ್ದುಪಡಿಸಲು ಯಾವುದೇ ಕಾರಣಗಳಿಲ್ಲ' ಎಂದು ಹೇಳಿದೆ.

'ಯುಎಪಿಎ ಕಲಂ 15ರಲ್ಲಿ ವ್ಯಾಖ್ಯಾನಿಸಲಾಗಿರುವ ಭಯೋತ್ಪಾದಕ ಕೃತ್ಯಗಳಲ್ಲಿ ಯಾವುದೇ ವ್ಯಕ್ತಿ ತನ್ನನ್ನು ತೊಡಗಿಸಿಕೊಂಡಿದ್ದರೆ, ಅವರನ್ನೂ ವಿಚಾರಣೆ ನಡೆಸಬಹುದು. ಆ ವ್ಯಕ್ತಿ ನಿಷೇಧಿತ ಉಗ್ರಗಾಮಿ ಸಂಘಟನೆಯ ಸದಸ್ಯನೇ ಆಗಿರಬೇಕೆಂದೇನೂ ಇಲ್ಲ' ಎಂದೂ ತಿಳಿಸಿದೆ. ಪ್ರಕರಣದ ವಿಚಾರಣೆಯನ್ನು ಶೀಘ್ರ ಪೂರ್ಣಗೊಳಿಸುವಂತೆ ಎನ್ಐಎ ವಿಶೇಷ ನ್ಯಾಯಾಲಯಕ್ಕೆ ನಿರ್ದೇಶಿಸಲಾಗಿದೆ. ಎನ್ಐಎ ಪರ ಪಿ.ಪ್ರಸನ್ನ ಕುಮಾರ್ ವಾದ ಮಂಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT