ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆನ್‌ಲೈನ್ ಜೂಜು ನಿಷೇಧ ತಿದ್ದುಪಡಿ ಕಾಯ್ದೆ ರದ್ದುಪಡಿಸಿದ ಹೈಕೋರ್ಟ್

Last Updated 14 ಫೆಬ್ರುವರಿ 2022, 6:36 IST
ಅಕ್ಷರ ಗಾತ್ರ

ಬೆಂಗಳೂರು: ಆನ್‌ಲೈನ್ಜೂಜುನಿಷೇಧಿಸಿ ಕರ್ನಾಟಕ ಪೊಲೀಸ್ ಕಾಯ್ದೆ-1963ಕ್ಕೆ ತರಲಾಗಿದ್ದ ತಿದ್ದುಪಡಿಯನ್ನು ಹೈಕೋರ್ಟ್ ರದ್ದುಪಡಿಸಿದೆ.

ತಿದ್ದುಪಡಿ ರದ್ದು ಕೋರಿ ‘ಆಲ್ ಇಂಡಿಯಾ ಗೇಮಿಂಗ್ ಫೆಡರೇಷನ್ ಆಫ್ ಇಂಡಿಯಾ’ಹಾಗೂ ‘ಗ್ಯಾಲಕ್ಟಸ್ ಫನ್‌ವೇರ್ ಟೆಕ್ನಾಲಜೀಸ್’ಸೇರಿದಂತೆ ಹಲವು ಕಂಪನಿಗಳು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠ ಮಾನ್ಯ ಮಾಡಿ ಸೋಮವಾರ ಈ ಕುರಿತ ತೀರ್ಪು ಪ್ರಕಟಿಸಿದೆ.

‘ಆನ್‌ಲೈನ್ ಬೆಟ್ಟಿಂಗ್ ನಿಷೇಧಕ್ಕೆ ಸಂಬಂಧಿಸಿದಂತೆ ಸಂವಿಧಾನದ ನಿಯಮಗಳಿಗೆ ಅನುಸಾರವಾಗಿ ಹೊಸ ಕಾಯ್ದೆ ತರಲು ಈ ತೀರ್ಪು ಯಾವುದೇ ತಡೆ ಒಡ್ಡುವುದಿಲ್ಲ’ಎಂದೂ ಹೈಕೋರ್ಟ್ ಇದೇ ವೇಳೆ ಸ್ಪಷ್ಟಪಡಿಸಿದೆ.

ತಿದ್ದುಪಡಿ ಕಾಯ್ದೆಯನ್ನು 2021ರ ಸೆಪ್ಟೆಂಬರ್ 21ರಂದು ವಿಧಾನಸಭೆ ಮತ್ತು ಅದೇ ತಿಂಗಳ 23ರಂದು ವಿಧಾನಪರಿಷತ್ ಅಂಗೀಕರಿಸಿತ್ತು. 2021ರ ಅಕ್ಟೋಬರ್ 4ರಂದು ರಾಜ್ಯಪಾಲರು ಅಧಿಸೂಚನೆ ಹೊರಡಿಸಿದ್ದರು. 5ರಂದು ತಿದ್ದುಪಡಿ ಕಾಯ್ದೆ ಜಾರಿಗೆ ಬಂದಿತ್ತು.

2021ರ ಡಿಸೆಂಬರ್ 22ರಂದು ವಿಚಾರಣೆ ಪೂರ್ಣಗೊಳಿಸಿದ್ದ ವಿಭಾಗೀಯ ನ್ಯಾಯಪೀಠ ತೀರ್ಪು ಕಾಯ್ದಿರಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT