ಗುರುವಾರ , ಅಕ್ಟೋಬರ್ 6, 2022
25 °C

ಮಾಹಿತಿ ಆಯುಕ್ತರ ಪಿಂಚಣಿ ಪ್ರಶ್ನಿಸಿದ್ದ ಅರ್ಜಿ ವಜಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ರಾಜ್ಯ ಮಾಹಿತಿ ಆಯುಕ್ತರಿಗೆ ಪಿಂಚಣಿ ನೀಡುವುದನ್ನು ಪ್ರಶ್ನಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಅರ್ಜಿ ಸಲ್ಲಿಸಿದ್ದ ನಿವೃತ್ತ ವಿಂಗ್ ಕಮಾಂಡರ್ ಜಿ.ಬಿ. ಅತ್ರಿ, ‘ಮೂರು ವರ್ಷ ಸೇವೆ ಸಲ್ಲಿಸಿದ ಮಾಹಿತಿ ಆಯುಕ್ತರಿಗೆ ಕಾನೂನುಬಾಹಿರವಾಗಿ ಹೆಚ್ಚುವರಿ ಪಿಂಚಣಿ ನೀಡಲಾಗುತ್ತಿದೆ’ ಎಂದು ವಾದಿಸಿದ್ದರು.

ಮಾಹಿತಿ ಹಕ್ಕುಗಳ ತಿದ್ದುಪಡಿ (2019) ಕಾಯ್ದೆ ಪ್ರಕಾರ, ಮಾಹಿತಿ ಆಯುಕ್ತರ ಐದು ವರ್ಷಗಳ ಅಧಿಕಾರದ ಅವಧಿಯನ್ನು ಮೂರು ವರ್ಷಕ್ಕೆ ಇಳಿಸಲಾಗಿದೆ. ಪಿಂಚಣಿ ಮತ್ತು ಇತರ ಭತ್ಯೆಗಳ ನಿಯಮಗಳನ್ನೂ ಕೇಂದ್ರ ಸರ್ಕಾರ ಅದರಲ್ಲಿ ಅಡಕಗೊಳಿಸಿದೆ ಎಂದು ಪೀಠ ತಿಳಿಸಿತು. ಅರ್ಜಿದಾರರು ಮಾಹಿತಿ ಆಯುಕ್ತರ ಹುದ್ದೆಗೆ ಅರ್ಜಿ ಸಲ್ಲಿಸಿ ವಿಫಲವಾಗಿದ್ದರು ಎಂಬುದನ್ನು ಪೀಠ ಉಲ್ಲೇಖಿಸಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು