ಮಂಗಳವಾರ, ಆಗಸ್ಟ್ 9, 2022
23 °C
"ಎಡಿಜಿಪಿಯೇ ಕಳಂಕಿತ ಅಧಿಕಾರಿ'

ಎಸಿಬಿಯೇ ಕಲೆಕ್ಷನ್‌ ಸೆಂಟರ್‌: ಹೈಕೋರ್ಟ್‌ ತರಾಟೆ!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳಕ್ಕೆ (ಎಸಿಬಿ) ಭ್ರಷ್ಟಾಚಾರವೇ ದಂಧೆಯಾಗಿ ಪರಿಣಮಿಸಿದೆ. ಸ್ವಯಂ ಎಸಿಬಿಯೇ ಅತಿ ದೊಡ್ಡ ಭ್ರಷ್ಟರ ಕೂಪವಾಗಿದೆ. ಇದರ ಮುಖ್ಯಸ್ಥ ಎಡಿಜಿಪಿಯೇ ಕಳಂಕಿತ ಅಧಿಕಾರಿ, ಎಸಿಬಿ ಕಚೇರಿಗಳೆಲ್ಲಾ ಕಲೆಕ್ಷನ್‌ ಸೆಂಟರ್‌ಗಳಾಗಿವೆ, ದೊಡ್ಡ ದೊಡ್ಡ ಐಎಎಸ್‌, ಐಪಿಎಸ್‌ ಅಧಿಕಾರಿಗಳನ್ನ ಹಿಡಿಯೋದು ಬಿಟ್ಟು ಬಾಲಂಗೋಚಿಗಳನ್ನು ಹಿಡಿದು ಕೊಂಡು ಕೋರ್ಟಿಗೆ ಬರುತ್ತೀರಿ...

ಲಂಚ ಪ್ರಕರಣದಲ್ಲಿ ಆರೋಪಿ ಯಾಗಿರುವ ಬೆಂಗಳೂರು ನಗರಜಿಲ್ಲಾಧಿ ಕಾರಿ ಕಚೇರಿಯ ಉಪ ತಹಶೀಲ್ದಾರ್ ಪಿ.ಎಸ್‌. ಮಹೇಶ್‌ ಸಲ್ಲಿಸಿರುವ ಜಾಮೀನು ಅರ್ಜಿ ಯನ್ನು ಬುಧವಾರ ವಿಚಾರಣೆ ನಡೆಸಿದ ನ್ಯಾಯ ಮೂರ್ತಿ ಎಚ್‌.ಪಿ.ಸಂದೇಶ್‌, ಎಸಿಬಿ ವಿರುದ್ಧ ಕೆಂಡಕಾರಿದ ಪರಿಯಿದು.

ವಿಚಾರಣೆ ವೇಳೆ ಅರ್ಜಿದಾರರ ಪರ ಹಾಜರಾಗಿದ್ದ ಹಿರಿಯ ವಕೀಲ ಎ.ಎಸ್‌. ಪೊನ್ನಣ್ಣ ಅವರು ಪ್ರಕರಣದ ವಿವರಣೆ ನೀಡಲು ಮುಂದಾಗುತ್ತಿದ್ದಂತೆಯೇ, ಎಸಿಬಿ ಪರ ವಕೀಲ ಪಿ.ಎನ್‌.ಮನ ಮೋಹನ್‌ ಅವರು, ‘ಈ ಪ್ರಕರಣ ದಲ್ಲಿ ಜಿಲ್ಲಾಧಿಕಾರಿ ಜೆ.ಮಂಜುನಾಥ್‌ ಅವರನ್ನೂ ಆರೋಪಿಯನ್ನಾಗಿಮಾಡಲಾಗಿದೆ. ಪ್ರಕರಣ ರದ್ದು ಕೋರಿದ್ದ ಮಂಜುನಾಥ್‌ ಅವರ ಅರ್ಜಿಯಲ್ಲಿ ನಿನ್ನೆಯಷ್ಟೇ ಹೈಕೋರ್ಟ್‌ ಮಧ್ಯಂತರ ಆದೇಶ ನೀಡಲು ನಿರಾಕರಿಸಿದೆ’ ಎಂಬ ಅಂಶವನ್ನು ನ್ಯಾಯಪೀಠದ ಗಮನಕ್ಕೆ ತಂದರು. ಈ ಮಾತಿಗೆ ನ್ಯಾಯಮೂರ್ತಿಗಳು, ‘ಎಸಿಬಿ ಏಕೆ ರಚನೆಯಾಗಿದೆ ನಿಮಗೆ ಗೊತ್ತಾ, ಇವತ್ತು ಎಸಿಬಿಯೇ ಭ್ರಷ್ಟಾಚಾರದ ದಂಧೆ ನಡೆಸುತ್ತಿದೆ. ಸರ್ಕಾರ ಉದ್ದೇಶಪೂರ್ವಕವಾಗಿ ಕಳಂಕಿತರನ್ನು ಇಲ್ಲಿಗೆ ಹಾಕುತ್ತಿದೆ. ನೀವು ಕೇವಲ ಗುಮಾಸ್ತರ ವಿರುದ್ಧ ಕೇಸು ಬುಕ್‌ ಮಾಡುವುದಲ್ಲ’ ಎಂದು ಕಟು ಮಾತಿನಲ್ಲಿ ತರಾಟೆಗೆ ತೆಗೆದುಕೊಂಡರು.

‘ಕಂದಾಯ ಅಧಿಕಾರಿಗಳ ಬಳಿ ಹೋಗಿ ಅಲ್ಲಿ ಏನೇನೆಲ್ಲಾ ಆಗುತ್ತದೆ ಎಂದು ನಿಮಗೆ ತಿಳಿಯುತ್ತದೆ. ಸಮಾಜಕ್ಕೆ ಅಂಟಿರುವ ಭ್ರಷ್ಟಾಚಾರದ ಈ ಕ್ಯಾನ್ಸರ್‌ ನಲ್ಲಿ ಮೇಲ್ಮಟ್ಟದ ಅಧಿಕಾರಿಗಳನ್ನು ಆರೋಪಿಗಳನ್ನಾಗಿ ಮಾಡದೇ ಕೆಳ ಹಂತದ ಅಧಿಕಾರಿಗಳನ್ನು ಮಾತ್ರ ಆರೋಪಿಗಳನ್ನಾಗಿ ಮಾಡಲಾಗುತ್ತಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು