ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಲನಾ ಪರೀಕ್ಷೆ: ಪ್ರತಿಕ್ರಿಯೆ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

Last Updated 13 ಜುಲೈ 2021, 16:07 IST
ಅಕ್ಷರ ಗಾತ್ರ

ಬೆಂಗಳೂರು: ಚಾಲನಾ ಪರವಾನಗಿ ನೀಡಲು ಪರೀಕ್ಷೆ ನಡೆಸುವಾಗ ಸಾರಿಗೆ ಇಲಾಖೆ ಅಧಿಕಾರಿಗಳು ಕೇಂದ್ರ ಮೋಟಾರು ವಾಹನಗಳ ನಿಯಮ 15 ಅನ್ನು ಪಾಲಿಸುತ್ತಿಲ್ಲ ಎಂದು ಆರೋಪಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಪ್ರತಿಕ್ರಿಯೆ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಬೆಂಗಳೂರಿನ ನಿವಾಸಿ ಎಸ್.ಗೌರಿಶಂಕರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ‘ಅರ್ಜಿದಾರರು ಅತ್ಯಂತ ಗಂಭೀರ ವಿಷಯ ಎತ್ತಿದ್ದಾರೆ’ ಎಂದು ಅಭಿಪ್ರಾಯಪಟ್ಟಿತು.

‘ಕೆಲವು ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ ದಿನಕ್ಕೆ 75ರಿಂದ 100 ಜನರ ಪರೀಕ್ಷೆ ನಡೆಸಲಾಗುತ್ತಿದೆ. ಇದನ್ನು ಗಮನಿಸಿದರೆ ನಿಯಮ 15ನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಿಲ್ಲ’ ಎಂದು ಅರ್ಜಿದಾರರು ದೂರಿದರು.

ನಿಯಮ 15ರ ಪ್ರಕಾರ ಪ್ರತಿ ಪರೀಕ್ಷೆಯನ್ನೂ ಸೂಕ್ಷ್ಮವಾಗಿ ಪರಿಗಣಿಸಿ ಅಧಿಕಾರಿಗಳು ಅಭಿಪ್ರಾಯ ದಾಖಲಿಸಬೇಕು. ಅದೊಂದು ವಿಸ್ತೃತ ಪ್ರಕ್ರಿಯೆಯಾಗಿದ್ದು, ಅದನ್ನು ಕಟ್ಟುನಿಟ್ಟಾಗಿ ಪಾಲಿಸಲು ಸಾರಿಗೆ ಇಲಾಖೆಗೆ ಸೂಚನೆ ನೀಡಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT