ಶನಿವಾರ, ಮೇ 28, 2022
27 °C

ಡಿಜಿಪಿ ಹುದ್ದೆಗೆ ರಾಜೀನಾಮೆ ನೀಡಿದ ರವೀಂದ್ರನಾಥ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

 ಡಿಜಿಪಿ ಡಾ.ಪಿ.ರವೀಂದ್ರನಾಥ್

ಬೆಂಗಳೂರು: ರಾಜ್ಯ ಪೊಲೀಸ್ ತರಬೇತಿ ವಿಭಾಗದ ಡಿಜಿಪಿ ಡಾ.ಪಿ.ರವೀಂದ್ರನಾಥ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಪತ್ರ ಸಲ್ಲಿಸಿದ್ದಾರೆ.

ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ (ಡಿಸಿಆರ್‌ಇ) ಡಿಜಿಪಿ ಆಗಿದ್ದ ರವೀಂದ್ರನಾಥ್ ಅವರನ್ನು ಇತ್ತೀಚೆಗಷ್ಟೇ ಪೊಲೀಸ್ ತರಬೇತಿ ವಿಭಾಗಕ್ಕೆ ವರ್ಗಾಯಿಸಲಾಗಿತ್ತು. ಕುಟುಂಬದ ಕಾರ್ಯಕ್ರಮ ನಿಮಿತ್ತ ಕೆಲದಿನ ರಜೆ ಪಡೆದಿದ್ದ ರವೀಂದ್ರನಾಥ್, ಸೋಮವಾರ ಅಧಿಕಾರ ವಹಿಸಿಕೊಂಡಿದ್ದರು.

ಅರಮನೆ ರಸ್ತೆಯಲ್ಲಿರುವ ಪೊಲೀಸ್ ತರಬೇತಿ ವಿಭಾಗದ ಕಚೇರಿಗೆ ಮಂಗಳವಾರ ಬೆಳಿಗ್ಗೆ ಬಂದಿದ್ದ ರವೀಂದ್ರನಾಥ್, ಅಲ್ಲಿಂದ ವಿಧಾನಸೌಧಕ್ಕೆ ಹೋಗಿ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ಇದನ್ನೂ ಓದಿ–

ರಾಜೀನಾಮೆ ಪತ್ರ ಸ್ವೀಕರಿಸಿರುವ ಕಾರ್ಯದರ್ಶಿ, ಮುಂದಿನ ಕ್ರಮಕ್ಕಾಗಿ ಪರಿಶೀಲಿಸುತ್ತಿದ್ದಾರೆ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು