ಬೆಂಗಳೂರು: ‘ದೇಶದಲ್ಲಿ ಕೋವಿಡ್ ಲಸಿಕೆಯ ಮೊದಲ ಡೋಸ್ ವಿತರಣೆಯಲ್ಲಿ ಕರ್ನಾಟಕವು ಮೊದಲ ಸ್ಥಾನದಲ್ಲಿದೆ. ಶೇ 94.38 ರಷ್ಟು ಮಂದಿ ಮೊದಲ ಡೋಸ್ ಲಸಿಕೆ ಪಡೆದಿದ್ದಾರೆ’ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.

ಈ ಬಗ್ಗೆ ಅವರು ಟ್ವೀಟ್ ಮಾಡಿದ್ದು, ‘ರಾಜ್ಯದಲ್ಲಿ 4.89 ಲಕ್ಷ ಮಂದಿ ಕೋವಿಡ್ ಲಸಿಕೆ ಪಡೆಯಲು ಅರ್ಹರಾಗಿದ್ದು, ಅವರಲ್ಲಿ 4.61 ಲಕ್ಷ ಮಂದಿ ಮೊದಲ ಡೋಸ್ ಪಡೆದುಕೊಂಡಿದ್ದಾರೆ. ಗುಜರಾತ್‌ನಲ್ಲಿ ಲಸಿಕೆ ಪಡೆಯಲು ಅರ್ಹರಾದ 4.89 ಲಕ್ಷ ಜನರಲ್ಲಿ 4.61 ಲಕ್ಷ ಮಂದಿ (ಶೇ 94.37 ರಷ್ಟು) ಮೊದಲ ಡೋಸ್ ಹಾಕಿಸಿಕೊಂಡಿದ್ದಾರೆ. ಮಧ್ಯ ಪ್ರದೇಶದಲ್ಲಿ 5.49 ಲಕ್ಷ ಜನರಲ್ಲಿ 5.12 ಲಕ್ಷ ಮಂದಿಗೆ (ಶೇ 93.77 ರಷ್ಟು) ಮೊದಲ ಡೋಸ್ ವಿತರಿಸಲಾಗಿದೆ’ ಎಂದು ಹೇಳಿದ್ದಾರೆ.

ರಾಜ್ಯದಲ್ಲಿಗುರುವಾರ 3.03 ಲಕ್ಷ ಡೋಸ್‌ಗಳನ್ನು ವಿತರಿಸಲಾಗಿದೆ. ಇದರೊಂದಿಗೆ ಈವರೆಗೆ ನೀಡಲಾದ ಒಟ್ಟು ಡೋಸ್‌ಗಳ ಸಂಖ್ಯೆ 7.93 ಕೋಟಿಗೆ ತಲುಪಿದೆ.3.31 ಕೋಟಿ ಮಂದಿ ಎರಡೂ ಡೋಸ್‌ಗಳನ್ನು ಪಡೆದುಕೊಂಡಿದ್ದಾರೆ. ಈ ವರ್ಷದ ಅಂತ್ಯದೊಳಗೆ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಎರಡು ಡೋಸ್ಲಸಿಕೆವಿತರಿಸುವ ಗುರಿಯನ್ನು ಸರ್ಕಾರ ಹಾಕಿಕೊಂಡಿದೆ.

18 ರಿಂದ 44 ವರ್ಷದೊಳಗಿನವರಲ್ಲಿ 2.64 ಕೋಟಿ ಮಂದಿ ಮೊದಲ ಡೋಸ್ ಹಾಗೂ 1.72 ಕೋಟಿ ಮಂದಿ ಎರಡನೇ ಡೋಸ್ಲಸಿಕೆಪಡೆದುಕೊಂಡಿದ್ದಾರೆ. 45 ವರ್ಷ ಮೇಲ್ಪಟ್ಟವರಲ್ಲಿ 1.80 ಕೋಟಿ ಮಂದಿ ಮೊದಲ ಡೋಸ್ ಹಾಕಿಸಿಕೊಂಡಿದ್ದಾರೆ. ಅವರಲ್ಲಿ 1.42 ಕೋಟಿ ಮಂದಿ ಎರಡೂ ಡೋಸ್‌ಗಳನ್ನು ಪಡೆದಿದ್ದಾರೆ.

ಆರೋಗ್ಯ ಕಾರ್ಯಕರ್ತರಲ್ಲಿ 7.64 ಲಕ್ಷ ಹಾಗೂಕೋವಿಡ್ಮುಂಚೂಣಿ ಯೋಧರಲ್ಲಿ 9.43 ಲಕ್ಷ ಮಂದಿ ಮೊದಲ ಡೋಸ್ ಪಡೆದಿದ್ದಾರೆ. ಇವರಲ್ಲಿ ಕ್ರಮವಾಗಿ 7.10 ಲಕ್ಷ ಮಂದಿ ಹಾಗೂ 8.76 ಲಕ್ಷ ಮಂದಿ ಎರಡೂ ಡೋಸ್ಲಸಿಕೆಹಾಕಿಸಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.