ಭಾನುವಾರ, ಮೇ 9, 2021
26 °C

ರಂಜಾನ್‌: ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ, ಇಫ್ತಾರ್ ಕೂಟಕ್ಕೆ ನಿರ್ಬಂಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದ ಕರಾವಳಿ ಭಾಗ ಹೊರತುಪಡಿಸಿ ಉಳಿದೆಡೆ ಬುಧವಾರದಿಂದ (ಏ.14) ರಂಜಾನ್‌ ಉಪವಾಸ ಆರಂಭವಾಗಿದ್ದು, ಕೋವಿಡ್ ಕಾರಣದಿಂದ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಪ್ರಕಟಿಸಿದೆ.

ಸಾಮೂಹಿಕ ಪ್ರಾರ್ಥನೆಗೆ ಅವಕಾಶ ಇರುವುದಿಲ್ಲ. ಪ್ರಾರ್ಥನೆಗೆ ಐದು ನಿಮಿಷ ಮೊದಲು ಮಸೀದಿ ತೆರೆಯಬೇಕು. ಕಂಟೈನ್‌ಮೆಂಟ್‌ ವಲಯಗಳಲ್ಲಿ ಇರುವ ಮಸೀದಿಗಳನ್ನು ಬಂದ್ ಮಾಡಬೇಕು ಎಂದು ಸರ್ಕಾರ ಸ್ಪಷ್ಟವಾಗಿ ತಿಳಿಸಿದೆ.

ಪ್ರಾರ್ಥನೆ ಮಾಡಲು ಸ್ವಂತ ಚಾದರ್‌ ತರಬೇಕು, ಮಾಸ್ಕ್ ಧರಿಸುವುದು ಕಡ್ಡಾಯ. ಎರಡು ಮೀಟರ್‌ನಷ್ಟು ಅಂತರ ಕಾಪಾಡಬೇಕು. ಇಫ್ತಾರ್‌ ಕೂಟ ನಡೆಸುವಂತಿಲ್ಲ ಸೇರಿದಂತೆ ವಿವಿಧ ನಿರ್ಬಂಧಗಳನ್ನು ವಿಧಿಸಲಾಗಿದೆ.

ಸಾಮೂಹಿಕ ಪ್ರಾರ್ಥನೆ ಸಮಯದಲ್ಲಿ ಅಂತರ ಕಾಯ್ದುಕೊಳ್ಳುವುದು ಕಡ್ಡಾಯವಾಗಿದೆ.ಮಸೀದಿಗೆ ಬರುವಾಗ ಸರದಿ ಸಾಲು ಅನುಸರಿಸಬೇಕು, ಪ್ರತಿ ಹೊತ್ತಿನ ನಮಾಜ್‌ ಬಳಿಕ ಸ್ಯಾನಿಟೈಸರ್‌ ಅಳವಡಿಕೆ ಕಡ್ಡಾಯವಾಗಿದೆ. ಅಲ್ಲದೆ 60 ವರ್ಷ ದಾಟಿದವರು ಮತ್ತು ಮಕ್ಕಳು ಮಸೀದಿಗೆ ಬರುವಂತಿಲ್ಲ ಎಂದು ಮಾರ್ಗಸೂಚಿಯಲ್ಲಿದೆ. ಇಫ್ತಾರ್‌ಗಳನ್ನು ಮನೆಯಲ್ಲೇ ಮಾಡಿಕೊಳ್ಳಬೇಕು, ಕೊರೊನಾ ನಿಯಮಗಳನ್ನು ಪಾಲಿಸಿ ಮಸೀದಿಗಳಲ್ಲಿ ನಮಾಜ್‌ ಮಾಡಬಹುದಾಗಿದೆ. ಆದರೆ, ಪ್ರಾರ್ಥನೆ ಕೂಗುವ ಐದು ನಿಮಿಷಗಳ ಮೊದಲು ಮಸೀದಿ ತೆರೆಯಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಿದೆ.

ಕರಾವಳಿ ಭಾಗದಲ್ಲಿ ಸೋಮವಾರ ರಾತ್ರಿ ಚಂದ್ರ ದರ್ಶನವಾಗಿದ್ದು, ದಕ್ಷಿಣ ಕನ್ನಡ, ಉಡುಪಿ, ಕೊಡಗು ಹಾಗೂ ಚಿಕ್ಕಮಗಳೂರಿನ ಕೆಲವು ಭಾಗಗಳಲ್ಲಿ ಮಂಗಳವಾರದಿಂದಲೇ ರಂಜಾನ್‌ ಉಪವಾಸ ಆರಂಭವಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು