ಜ.28ಕ್ಕೆ ಜಂಟಿ ಅಧಿವೇಶನ

ಬೆಂಗಳೂರು: ಇದೇ 28 ರಂದು ವಿಧಾನಮಂಡಲದ ಜಂಟಿ ಅಧಿವೇಶನ ನಡೆಸಲು ಬುಧವಾರ ನಡೆದ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.
ಸಂಪುಟ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ವಿವರ ನೀಡಿದ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ, ‘ಜ.28ರಂದು ರಾಜ್ಯಪಾಲರು ವಿಧಾನ
ಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಲಿದ್ದಾರೆ. ಫೆಬ್ರುವರಿ 5ರವರೆಗೂ ವಿಧಾನಮಂಡಲ ಅಧಿವೇಶನ ನಡೆಯಲಿದೆ’ ಎಂದರು.
ಬಜೆಟ್ ಅಧಿವೇಶನವನ್ನು ಮಾರ್ಚ್ ತಿಂಗಳಲ್ಲಿ ನಡೆಸುವ ಬಗ್ಗೆ ತಾತ್ಕಾಲಿಕ ನಿರ್ಧಾರ ಕೈಗೊಳ್ಳಲಾಗಿದೆ. ಜಂಟಿ ಅಧಿವೇಶನ ಮುಗಿದ ಬಳಿಕ ಈ ಕುರಿತು ಅಂತಿಮ ನಿರ್ಧಾರಕ್ಕೆ ಬರಲಾಗುವುದು ಎಂದು ತಿಳಿಸಿದರು.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.