ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದಲ್ಲಿ ಏನಾಗುತ್ತಿದೆ ಎಂಬುದನ್ನು ಮೋದಿ ನೋಡಲಿ: ಮಲ್ಲಿಕಾರ್ಜುನ ಖರ್ಗೆ

Last Updated 12 ಏಪ್ರಿಲ್ 2022, 19:59 IST
ಅಕ್ಷರ ಗಾತ್ರ

ಕಲಬುರಗಿ: ‘ರಾಜ್ಯ ಬಿಜೆಪಿ ಸರ್ಕಾರದಲ್ಲಿ ಕಾಮಗಾರಿಗಳಲ್ಲಿ ತಮ್ಮಿಂದ ಪರ್ಸೆಂಟೇಜ್ ಪಡೆಯಲಾಗುತ್ತಿದೆ ಎಂದು ಗುತ್ತಿಗೆದಾರರು ಖುದ್ದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡಿದ್ದು, ಈಗಲಾದರೂ ರಾಜ್ಯದಲ್ಲಿ ಏನಾಗುತ್ತಿದೆ ಎಂಬುದನ್ನು ಪ್ರಧಾನಿ ನೋಡಲಿ’ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಮಂಗಳವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯದಲ್ಲಿ ಪರ್ಸೆಂಟೇಜ್ ರಾಜಕಾರಣ ನಡೆಯುತ್ತಿದ್ದರೂ ಆ ಬಗ್ಗೆ ಗಮನ ಹರಿಸುವ ಬದಲು ಮೋದಿ ಅವರು ತಾವು ಮಾಡಿದ್ದೇ ಸರಿ ಅನ್ನುವ ಭ್ರಮೆಯಲ್ಲಿದ್ದಾರೆ’ ಎಂದು ವ್ಯಂಗ್ಯವಾಡಿದರು.

‘ಗುತ್ತಿಗೆದಾರರು ಪರ್ಸೆಂಟೇಜ್‌ಗೆ ನಲುಗಿ ಹೋಗಿದ್ದಾರೆ. ಡಬಲ್ ಎಂಜಿನ್ ಸರ್ಕಾರವೆಂದು ಹೇಳಿಕೊಂಡು ಜನರನ್ನು ಯಾಮಾರಿಸುತ್ತಿರುವ ಬಿಜೆಪಿ ರಾಜ್ಯವನ್ನು ಹಾಳು ಮಾಡುತ್ತಿದೆ.ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿಗೆ ಬಂದಾಗ, ಹೀಗಾದರೆ ಸರ್ಕಾರಕ್ಕೆ ಮತ್ತು ರಾಜ್ಯಕ್ಕೆ ಕೆಟ್ಟ ಹೆಸರು ಬರುತ್ತದೆ. ಇದಕ್ಕೆ ಕಡಿವಾಣ ಹಾಕಿ ಎಂದು ಹೇಳಿದ್ದೆ‘ ಎಂದ ಅವರು, ಸಂತೋಷ ಪಾಟೀಲಆತ್ಮಹತ್ಯೆ ಪ್ರಕರಣ ಕುರಿತಂತೆ ಸರ್ಕಾರ ತಕ್ಷಣ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ತಮ್ಮನ್ನು ಜಾರಿ ನಿರ್ದೇಶನಾಲಯ (ಇ.ಡಿ.) ವಿಚಾರಣೆಗೆ ಒಳಪಡಿಸಿದ ಕುರಿತು ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಖರ್ಗೆ, ‘ಇದು ನಮ್ಮ ಪಕ್ಷದ ಆಂತರಿಕ ವಿಚಾರ. ಹೀಗಾಗಿ, ಇಲ್ಲಿ ಮಾತನಾಡಲಾರೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT