ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್‌ಗೆ ಕೋವಿಡ್ ದೃಢ

ಯಲ್ಲಾಪುರ: ಕಾರ್ಮಿಕ ಮತ್ತು ಸಕ್ಕರೆ ಖಾತೆ ಸಚಿವ ಶಿವರಾಮ ಹೆಬ್ಬಾರ್ ಮತ್ತು ಅವರ ಪತ್ನಿ ವನಜಾಕ್ಷಿ ಹೆಬ್ಬಾರ್ ಅವರಿಗೆ ಶನಿವಾರ ಕೋವಿಡ್ ದೃಢಪಟ್ಟಿದೆ.
ಈ ಬಗ್ಗೆ ಸ್ವತಃ ಸಚಿವರೆ ತಿಳಿಸಿದ್ದಾರೆ. ತಾಲ್ಲೂಕು ಆಸ್ಪತ್ರೆಯಲ್ಲಿ ತಾನು ಮತ್ತು ಪತ್ನಿ ಇಬ್ಬರೂ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದೆವು. ಇಬ್ಬರ ಪರೀಕ್ಷಾ ವರದಿ ಪಾಸಿಟಿವ್ ಬಂದಿದೆ. ನಮಗೆ ಸೋಂಕಿನ ಲಕ್ಷಣವಿಲ್ಲ. ಆದರೂ ಮುಂದಿನ ಒಂದು ವಾರಗಳ ಕಾಲ ಹೋಂ ಕ್ವಾರಂಟೈನ್ ಗೊಳಪಡಲಿದ್ದೇವೆ ಎಂದು ಸಚಿವ ಶಿವರಾಮ ಹೆಬ್ಬಾರ್ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.
ಸಾರ್ವಜನಿಕರು ಜ್ವರ, ನೆಗಡಿ ಕಂಡುಬಂದರೆ ಅಲಕ್ಷಿಸದೆ ಕೂಡಲೆ ಸಮೀಪದ ಆಸ್ಪತ್ರೆಗೆ ತೆರಳಿ ಗಂಟಲುದ್ರವ ಪರೀಕ್ಷಿಸಿಕೊಳ್ಳಬೇಕು. ಕಳೆದ 2 ದಿನಗಳಿಂದ ತಮ್ಮ ಪ್ರಾಥಮಿಕ ಹಾಗೂ ದ್ವೀತಿಯ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಕೊಳ್ಳಬೇಕು ಎಂದು ವಿನಂತಿಸಿದರು.
ಇಂದು ನಾನು ಹಾಗೂ ನನ್ನ ಧರ್ಮಪತ್ನಿ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದು, ಪರೀಕ್ಷಾ ವರದಿಯಲ್ಲಿ ಇಬ್ಬರಿಗೂ ಸಹ ಪಾಸಿಟಿವ್ ಎಂದು ಬಂದಿದೆ. ಯಾವುದೇ...
Posted by Shivaram Hebbar on Saturday, September 5, 2020
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.