ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಧಾನ ಪರಿಷತ್‌ನಲ್ಲಿ  ಗದ್ದಲ: ಅನಿರ್ದಿಷ್ಟಾವಧಿಗೆ ಕಲಾಪ ಮುಂದೂಡಿಕೆ

Last Updated 15 ಡಿಸೆಂಬರ್ 2020, 6:35 IST
ಅಕ್ಷರ ಗಾತ್ರ

ಬೆಂಗಳೂರು: ಗೋಹತ್ಯೆ ನಿಷೇಧ ತಿದ್ದುಪಡಿ ವಿಧೇಯಕ, ಸಭಾಪತಿ ವಿರುದ್ಧ ಅವಿಶ್ವಾಸ ನಿರ್ಣಯ ಸೇರಿದಂತೆ ಕೆಲ ವಿಷಯಗಳ ಮಂಡನೆ ದೃಷ್ಟಿಯಿಂದ ಕರೆದಿದ್ದ ವಿಧಾನಪರಿಷತ್‌ನ ಒಂದು ದಿನದ ಅಧಿವೇಶನದಲ್ಲಿ ನಾಟಕೀಯ ಬೆಳವಣಿಗೆ ನಡೆದಿದ್ದು, ಕಲಾಪವನ್ನು ಸಭಾಪತಿ ಪ್ರತಾಪ ಚಂದ್ರಶೆಟ್ಟಿ ಅನಿರ್ದಿಷ್ಟಾವಧಿಗೆ ಮುಂದೂಡಿದ್ದಾರೆ.

ಸಭಾಪತಿ ಪೀಠಕ್ಕೆ ಬರುವ ಮೊದಲೇ ಪೀಠದಲ್ಲಿ ಕುಳಿತ ಉಪ ಸಭಾಪತಿ ಧರ್ಮೇಗೌಡ ಅವರನ್ನು ಕಾಂಗ್ರೆಸ್‌ ಸದಸ್ಯರು ಬಲವಂತವಾಗಿ ಎಳೆದು ಕೆಳಗೆ ಇಳಿಸಿದರು.

ಈ ವೇಳೆ ಪೀಠದ ಬಳಿಗೆ ಧಾವಿಸಿದ ಬಿಜೆಪಿ ಸದಸ್ಯರು, ಧರ್ಮೇಗೌಡರು ಫೀಠದಲ್ಲಿ ಕುಳಿತುಕೊಳ್ಳುವಂತೆ ಆಗ್ರಹಿಸಿದರು. ಜೆಡಿಎಸ್‌ ಸದಸ್ಯ ಬಸವರಾಜ ಹೊರಟ್ಟಿಯವರು ಎರಡೂ ಪಕ್ಷಗಳ ಸದಸ್ಯರನ್ನು ಸಮಾಧಾನಪಡಲಸು ಯತ್ನಿಸಿದರು. ಬಳಿಕ ಪೀಠಕ್ಕೆ ಆಗಮಿಸಿದ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಕಲಾಪವನ್ನು ಮುಂದೂಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT