ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಬ್ಬಳ್ಳಿ ಮರ್ಯಾದೆ ಹಾಳು ಮಾಡಬಾರದು: ಬಸವರಾಜ ಹೊರಟ್ಟಿ

Last Updated 18 ಏಪ್ರಿಲ್ 2022, 7:18 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಇಲ್ಲಿಯವರೆಗೆ ಹುಬ್ಬಳ್ಳಿ ಬಹಳ ಶಾಂತ ರೀತಿಯಲ್ಲಿದೆ. ಹಿಂದಿನ ದಿನಗಳು ಮತ್ತೆ ಮರುಕಳಿಸಬಾರದು. ರಾಜ್ಯದಲ್ಲಿ ಹುಬ್ಬಳ್ಳಿ ಬಗ್ಗೆ ಕೆಟ್ಟ ಅಭಿಪ್ರಾಯ ಮೂಡಬಾರದು. ಇದಕ್ಕೆ ಎಲ್ಲಾ ನಾಗರಿಕರು ಸಹಕರಿಸಬೇಕು‌. ಪ್ರತಿಯೊಬ್ಬರು ನಮ್ಮೂರು ಎಂಬುದನ್ನು ಮನಸ್ಸಿನಲ್ಲಿ ಇಟ್ಟುಕೊಂಡು ಊರಿನ ಅಭಿಮಾನ ಬೆಳೆಸಿಕೊಳ್ಳಬೇಕು‌.ನಗರದ ಮರ್ಯಾದೆಕಳೆಯಬಾರದು ಎಂಬುದು ಎಲ್ಲರ ಮನಸ್ಸಿನಲ್ಲಿ ಬರಬೇಕು ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಾಜದಲ್ಲಿ ಒಡಕು ಮೂಡಿ, ಪ್ರಾಣಹಾನಿ ಮಾಡಿ ಹಾಗೂ ಆಸ್ತಿ ಹಾನಿ ಆಗಬಾರದು. ಆ ದೃಷ್ಟಿಯಲ್ಲಿ ಯಾರು ತಪ್ಪು ಮಾಡಿದ್ದಾರೆ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದರು.

ಗಲಭೆ ಕುರಿತು ಈಗಾಗಲೇ ಪೋಲಿಸ್ ಕಮಿಷನರ್ ಜೊತೆ ಮಾತನಾಡಿದ್ದೇನೆ‌. ಯಾರು ತಪ್ಪು ಮಾಡಿದ್ದಾರೊ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಮತ್ತೆ ಯಾವುದೇ ರೀತಿಯ ಅಹಿತಕರ ಘಟನೆಗಳು ಜರುಗದಂತೆ ನೋಡಿಕೊಳ್ಳಿ ಎಂದು ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.

ಪೊಲೀಸ್ ಇಲಾಖೆಯ ಪಿಎಸ್‌ಐ ನೇಮಕಾತಿಅಕ್ರಮ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಪೊಲೀಸ್ ಪರೀಕ್ಷೆಗಳು ಸರಿಯಾದ ರೀತಿಯಲ್ಲಿ ನಡೆಯಬೇಕು. ಯಾಕೆಂದರೆ ನಾಡಿನ ರಕ್ಷಣೆ ಮಾಡುವವರು ಅವರೇ. ಹಾಗಾಗಿ, ಅಕ್ರಮಕ್ಕೆ ಅವಕಾಶವಿಲ್ಲದಂತೆ ಪರೀಕ್ಷೆ ನಡೆಸಬೇಕು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT