ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಚಿವ ಈಶ್ವರಪ್ಪ ರಾಜೀನಾಮೆಗೆ ಆಗ್ರಹ: ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್ ಪ್ರತಿಭಟನೆ

Last Updated 22 ಫೆಬ್ರುವರಿ 2022, 7:28 IST
ಅಕ್ಷರ ಗಾತ್ರ

ಬೆಂಗಳೂರು: ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್. ಈಶ್ವರಪ್ಪ ಅವರನ್ನು ವಜಾಗೊಳಿಸುವಂತೆ ಆಗ್ರಹಿಸಿ ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ಮುಂದುವರಿಸಿದ್ದಾರೆ.

ಈಶ್ವರಪ್ಪ ವಿರುದ್ಧ ದಿಕ್ಕಾರ ಕೂಗಿದ ಕಾಂಗ್ರೆಸ್ ಸದಸ್ಯರು ಸಭಾಪತಿ ಪೀಠದ ಎದುರು ಪ್ರತಿಭಟನೆ ನಡೆಸಿದರು. ಈ ಗದ್ದಲದ ನಡುವೆಯೇ ಪ್ರಶ್ನೋತ್ತರ ನಡೆಯಿತು.

ಬಳಿಕ 2011ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ 362 ಹುದ್ದೆಗಳಿಗೆ ಆಯ್ಕೆಯಾದವರ ನೇಮಕಾತಿಗೆ ಅವಕಾಶ ಕಲ್ಪಿಸುವ ಮಸೂದೆಯೂ ಸೇರಿ ನಾಲ್ಕು ಮಸೂದೆಗಳಿಗೆ ವಿಧಾನ ಪರಿಷತ್‌ನಲ್ಲಿ ಅಂಗೀಕಾರ ನೀಡಲಾಯಿತು.

ಗದ್ದಲ ಮುಂದುವರಿದ ಕಾರಣ ಸಭಾಪತಿ ಬಸವರಾಜ ಹೊರಟ್ಟಿ ಕಲಾಪವನ್ನು ಮಧ್ಯಾಹ್ನ2 ಗಂಟೆಗೆ ಮುಂದೂಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT