ಮಂಗಳವಾರ, ಜೂನ್ 28, 2022
21 °C

ಲೇಖಕಿಯರ ಸಂಘ: ಚುನಾವಣೆಗೆ ನಿರ್ಧಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಕೆಲವು ಲೇಖಕಿಯರ ಅಭಿಪ್ರಾಯಗಳನ್ನು ಗೌರವಿಸಿ, ಕರ್ನಾಟಕ ಲೇಖಕಿಯರ ಸಂಘಕ್ಕೆ ಚುನಾವಣೆ ನಡೆಸಬೇಕೆನ್ನುವ ನಿರ್ಧಾರ ಕೈಗೊಳ್ಳಲಾಗಿದೆ’ ಎಂದು ಸಂಘದ ಅಧ್ಯಕ್ಷೆ ವನಮಾಲಾ ಸಂಪನ್ನಕುಮಾರ್ ತಿಳಿಸಿದ್ದಾರೆ.

ಅಧ್ಯಕ್ಷತೆಯ ಅಧಿಕಾರ ಅವಧಿ ಮುಗಿದಿದ್ದರೂ ಚುನಾವಣೆ ನಡೆಸಲು ವನಮಾಲಾ ಸಂಪನ್ನಕುಮಾರ್‌ ಸಿದ್ಧರಿಲ್ಲ ಎಂದು ಸಂಘದ ಹಲವು ಸದಸ್ಯರು ಈ ಹಿಂದೆ ಆಕ್ಷೇಪ ವ್ಯಕ್ತಪಡಿಸಿದ್ದರು. ಹೇಮಲತಾ ಮಹಿಷಿ, ಬಿ.ಟಿ. ಲಲಿತಾ ನಾಯಕ್‌, ವಿಜಯಮ್ಮ, ಉಷಾ ಪಿ. ರೈ, ಸಂಧ್ಯಾ ರೆಡ್ಡಿ, ವಸುಂಧರಾ ಭೂಪತಿ ಮುಂತಾದವರು ಸಹಕಾರ ಸಂಘಗಳ ಇಲಾಖೆ ರಿಜಿಸ್ಟ್ರಾರ್‌ ಅವರಿಗೆ ಈ ಕುರಿತು ಪತ್ರ ಬರೆದಿದ್ದರು. 

‘ಸಂಘವು 2022ರ ಏ.17ರಂದು ಕರೆದ ವಾರ್ಷಿಕ ಸಭೆಯಲ್ಲಿ ಚುನಾವಣೆಯ ಬಗ್ಗೆ ಸದಸ್ಯರ ಅಭಿಪ್ರಾಯ ಸಂಗ್ರಹಿಸಲಾಯಿತು. ಕೋವಿಡ್ ಬಿಕ್ಕಟ್ಟಿನಿಂದಾಗಿ ಎರಡು ವರ್ಷಗಳು ಸಂಘದ ಕೆಲಸ ಕಾರ್ಯಗಳನ್ನು ಮಾಡಲಾಗದ ಕಾರಣ, ಸಮಯ ಮತ್ತು ಹಣದ ಸದುಪಯೋದಗ ದೃಷ್ಟಿಯಿಂದ ಸದ್ಯದ ಪರಿಸ್ಥಿತಿಯಲ್ಲಿ ಚುನಾವಣೆ ಬೇಡವೆಂದು ನೂರಾರು ಲೇಖಕಿಯರು ತಿಳಿಸಿದ್ದರು. ಸಂಘದ ನಿಬಂಧನೆಯಲ್ಲಿ ಅಧ್ಯಕ್ಷರು ಮತ್ತು ಸಮಿತಿ ಇನ್ನೊಂದು ಅವಧಿಗೆ ಮುಂದುವರಿಯಲು ಅವಕಾಶವಿದೆ. ಸರ್ವಸದಸ್ಯರ ಸಭೆಯಲ್ಲಿ ಚುನಾವಣೆ ಬೇಡ ಎಂಬ ಬಹುಮತದ ಅಭಿಪ್ರಾಯ ವ್ಯಕ್ತವಾಗಿದ್ದರೂ ಚುನಾವಣೆ ನಡೆಸುವ ನಿರ್ಧಾರ ಕೈಗೊಳ್ಳಲಾಗಿದೆ’ ಎಂದು ಪ್ರಕಟಣೆಯಲ್ಲಿ ವನಮಾಲಾ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು