ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

4 ಜಿಲ್ಲೆಗಳಲ್ಲಿ ಅಂಗಡಿ ತೆರೆಯಲು ಬೆಳಗ್ಗೆ 6ರಿಂದ ಮಧ್ಯಾಹ್ನ 1ರ ವರೆಗೆ ಅವಕಾಶ

Last Updated 22 ಜೂನ್ 2021, 12:34 IST
ಅಕ್ಷರ ಗಾತ್ರ

ಬೆಂಗಳೂರು: ದಕ್ಷಿಣ ಕನ್ನಡ, ಹಾಸನ, ದಾವಣಗೆರೆ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಬೆಳಗ್ಗೆ 6 ಗಂಟೆ ಯಿಂದ ಮಧ್ಯಾಹ್ನ 1 ಗಂಟೆಯ ವರೆಗೆ ಎಲ್ಲ ಮಾದರಿಯ ಅಗತ್ಯ ವಸ್ತುಗಳ ಮಾರಾಟಕ್ಕೆ ಅನುವು ಮಾಡಿಕೊಡಲಾಗಿದೆ.

ಇಂದಿನಿಂದಲೇ ಚಾಲ್ತಿಗೆ ಬರುವಂತೆ ಹವಾ ನಿಯಂತ್ರಿತ ಅಂಗಡಿ, ಕಾಂಪ್ಲೆಕ್ಸ್‌ ಮತ್ತು ಮಾಲ್‌ಗಳನ್ನು ಹೊರತು ಪಡಿಸಿ ಎಲ್ಲ ಅಂಗಡಿ ಮುಂಗಟ್ಟುಗಳನ್ನು ತೆರೆಯಲು ಅವಕಾಶ ನೀಡಲಾಗಿದೆ ಎಂದು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎನ್‌ ಮಂಜುನಾಥ ಪ್ರಸಾದ್‌ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಿಬಿಎಂಪಿ ವ್ಯಾಪ್ತಿ ಸೇರಿದಂತೆ 17 ಜಿಲ್ಲೆಗಳಲ್ಲಿ ಸೋಮವಾರ ಬೆಳಿಗ್ಗೆಯಿಂದ ಹಗಲಿನ ವೇಳೆಯಲ್ಲಿ ಲಾಕ್‌ಡೌನ್‌ ಬಹುತೇಕ ತೆರವಾಗಿದೆ. 13 ಜಿಲ್ಲೆಗಳಲ್ಲಿ ಮಧ್ಯಾಹ್ನ 2 ಗಂಟೆಯವರೆಗೂ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿತ್ತು. ಇದನ್ನು ಬಳಸಿಕೊಂಡ ಜನರು ನಗರ, ಪಟ್ಟಣ, ಪೇಟೆಗಳತ್ತ ಮುಖ ಮಾಡಿದ್ದು, ಮೊದಲ ದಿನವೇ ಹಲವು ಕಡೆಗಳಲ್ಲಿ ಜನದಟ್ಟಣೆ ನಿಯಂತ್ರಿಸಲು ಪೊಲೀಸರು, ಇತರ ಇಲಾಖೆಗಳ ಅಧಿಕಾರಿಗಳು ಅಕ್ಷರಶಃ ಪರದಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT