ಭಾನುವಾರ, ಮೇ 16, 2021
27 °C

ದಿನಸಿ ಅಂಗಡಿಗೆ ಮಧ್ಯಾಹ್ನ 12ರವರೆಗೂ ಅವಕಾಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ದಿನಸಿ ಮತ್ತು ಎಪಿಎಂಸಿ ಮಾರುಕಟ್ಟೆಯನ್ನು ಬೆಳಿಗ್ಗೆ 6 ಗಂಟೆಯಿಂದ 12ರವರೆಗೆ ತೆರೆಯಲು ಅವಕಾಶ ಕಲ್ಪಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಮೇ 2ರ ಭಾನುವಾರದಿಂದ ಅನ್ವಯವಾಗುವಂತೆ ಈ ಪರಿಷ್ಕೃತ ಆದೇಶ ಜಾರಿಯಲ್ಲಿರಲಿದೆ ಎಂದು  ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್‌. ಮಂಜುನಾಥ ಪ್ರಸಾದ್ ತಿಳಿಸಿದ್ದಾರೆ.

ಖರೀದಿ ವೇಳೆ ಮಾರುಕಟ್ಟೆಯಲ್ಲಿ ಆಗುತ್ತಿರುವ ನೂಕುನುಗ್ಗಲು, ಜನಸಂದಣಿ ತಪ್ಪಿಸಲು ಈ ‍ ಉಪಕ್ರಮ ಕೈಗೊಳ್ಳಲಾಗಿದೆ. ವಾರದ ಸಂತೆ ಸೇರಿದಂತೆ ಎಲ್ಲ ರೀತಿಯ ಸಂತೆಗಳನ್ನೂ ನಿರ್ಬಂಧಿಸಲಾಗಿದೆ. ಅದರ ಬದಲಿಗೆ ಹಾಪ್‌ಕಾಮ್ಸ್‌, ಹಾಲಿನ ಬೂತ್‌ಗಳು, ತಳ್ಳುಗಾಡಿಗಳ ಮೂಲಕ ತರಕಾರಿ, ಹಣ್ಣು ಮಾರಾಟಮಾಡುವವರು ಹಾಗೂ ದುಬಾರಿ ಬೆಲೆಗೆ ಮಾರದೇ ಮಾರುಕಟ್ಟೆ ದರದಲ್ಲಿ ವ್ಯಾಪಾರ ಮಾಡುವವರಿಗೆ ಬೆಳಿಗ್ಗೆ 6ರಿಂದ ಸಂಜೆ 6ರವರೆಗೂ ಅವಕಾಶ ನೀಡಲಾಗಿದೆ.

ಬಿಬಿಎಂಪಿ, ಪೊಲೀಸ್ ಕಮಿಷನರ್, ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಈ ಆದೇಶವನ್ನು ಜಾರಿ ಮಾಡಲು ಅವರು ಸೂಚಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು