ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Karnataka Covid-19 Updates: ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆ ಏರಿಕೆ

Last Updated 27 ಏಪ್ರಿಲ್ 2022, 15:59 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 126 ಹೊಸ ಪ್ರಕರಣಗಳು ವರದಿಯಾಗಿವೆ. ಇದೇ ಅವಧಿಯಲ್ಲಿ ಯಾವುದೇ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಸದ್ಯ ರಾಜ್ಯದಲ್ಲಿ 1,713 ಸಕ್ರಿಯ ಪ್ರಕರಣಗಳಿದ್ದು, ಸೋಂಕಿನ ದೈನಂದಿನ ಪಾಸಿಟಿವಿಟಿ ದರ ಶೇ 1.16 ರಷ್ಟಿದೆ. ಮರಣ ಪ್ರಮಾಣ ಶೂನ್ಯವಾಗಿದೆ. ರಾಜ್ಯದಲ್ಲಿ ಈವರೆಗೆ ಒಟ್ಟು ಸೋಂಕಿತರ ಸಂಖ್ಯೆ 39,47,209ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ 114 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, 92 ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ನಗರದಲ್ಲಿ 1,648 ಸಕ್ರಿಯ ಪ್ರಕರಣಗಳಿವೆ. ರಾಜ್ಯದ 22 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣಗಳು ವರದಿಯಾಗಿವೆ.

ಚಿತ್ರದುರ್ಗದಲ್ಲಿ 2, ದಕ್ಷಿಣ ಕನ್ನಡ 1, ಕೋಲಾರ 1, ಮೈಸೂರು 2, ತುಮಕೂರು 1 ಮತ್ತು ವಿಜಯಪುರದಲ್ಲಿ 4 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ.

ರಾಜ್ಯದಲ್ಲಿ ಈವರೆಗೂ 10.58 ಕೋಟಿಗೂ ಅಧಿಕ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT