ಬೆಂಗಳೂರು: ರಾಜ್ಯದಾದ್ಯಂತ 24 ಗಂಟೆಗಳ ಲ್ಲಿ 645 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 6 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,33,077 ಕ್ಕೆ ಏರಿಕೆಯಾಗಿದೆ. ಆ ಪೈಕಿ 12,181 ಮಂದಿ ಸಾವಿಗೀಡಾಗಿದ್ದಾರೆ.
ರಾಜ್ಯದಲ್ಲಿ ಚೇತರಿಕೆ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಿದ್ದು, ಇದುವರೆಗೆ 9,13,012 ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ 172 ಮಂದಿ ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ರಾಜ್ಯದಲ್ಲಿ 7,865 ಸಕ್ರಿಯ ಪ್ರಕರಣಗಳಿವೆ.
ಇಂದು ಬೆಂಗಳೂರಿನಲ್ಲಿ 357, ಚಿಕ್ಕಬಳ್ಳಾಪುರ 36, ಮೈಸೂರು 34, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊಸದಾಗಿ 25 ಪ್ರಕರಣಗಳು ದಾಖಲಾಗಿವೆ.
ಈವರೆಗೆ ಒಟ್ಟು 1,61,33,663 ಕೊರೊನಾ ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಇಂಗ್ಲೆಂಡ್ನಿಂದ ರಾಜ್ಯಕ್ಕೆ ಬಂದ 14 ಜನರಲ್ಲಿ ರೂಪಾಂತರಿ ಕೊರೊನಾ ವೈರಸ್ ಸೋಂಕು ತಗುಲಿರುವುದು ಪತ್ತೆಯಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.