ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿಸಿಎಫ್‌ ಜಿ. ವೆಂಕಟೇಶ್‌ ಮನೆ ಮೇಲೆ ಲೋಕಾಯುಕ್ತ ದಾಳಿ

Last Updated 10 ಫೆಬ್ರುವರಿ 2023, 4:27 IST
ಅಕ್ಷರ ಗಾತ್ರ

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಮೇಲೆ ಕೋಲಾರ ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಜಿ. ವೆಂಕಟೇಶ್‌ ಮೇಲೆ ಶುಕ್ರವಾರ ಬೆಳಿಗ್ಗೆ ದಾಳಿ ನಡೆಸಿರುವ ಲೋಕಾಯುಕ್ತ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ವೆಂಕಟೇಶ್‌ ವಿರುದ್ಧ ಎಫ್‌ಐಆರ್‌ ದಾಖಲಿಸಿಕೊಂಡಿರುವ ಲೋಕಾಯುಕ್ತದ ಬೆಂಗಳೂರು ನಗರ ಘಟಕದ ಪೊಲೀಸರು, ಆರೋಪಿತ ಅಧಿಕಾರಿಯ ಮನೆ, ಅವರಿಗೆ ಸಂಬಂಧಿಸಿದ ಕೆಲವು ಸ್ಥಳಗಳು ಹಾಗೂ ಅವರ ನಿಕಟವರ್ತಿಗಳ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ. ಬೆಂಗಳೂರು, ಕೋಲಾರ ಮತ್ತು ರಾಮನಗರ ಜಿಲ್ಲೆಗಳ ಎಂಟು ಸ್ಥಳಗಳಲ್ಲಿ ಶೋಧ ನಡೆಸಲಾಗುತ್ತಿದೆ.

ಬೆಂಗಳೂರಿನ ವಿಜಯನಗರದಲ್ಲಿರುವ ಆರೋಪಿಯ ಮನೆ ಮೇಲೂ ದಾಳಿ ನಡೆದಿದ್ದು, ಲೋಕಾಯುಕ್ತದ ಬೆಂಗಳೂರು ನಗರ ಘಟಕದ ಎಸ್‌ಪಿ ಕೆ.ವಿ. ಅಶೋಕ್‌ ನೇತೃತ್ವದಲ್ಲಿ ಶೋಧ ನಡೆಯುತ್ತಿದೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT