ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ನಾಟಕ– ಮಹಾರಾಷ್ಟ್ರ ಗಡಿ: ನಾಳೆ ‘ಸುಪ್ರೀಂ’ ವಿಚಾರಣೆ

Last Updated 22 ನವೆಂಬರ್ 2022, 5:42 IST
ಅಕ್ಷರ ಗಾತ್ರ

ಬೆಳಗಾವಿ: ಕರ್ನಾಟಕ– ಮಹಾರಾಷ್ಟ್ರ ಗಡಿ ವಿವಾದ ಕುರಿತು ಮಹಾರಾಷ್ಟ್ರ ಸರ್ಕಾರ ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಸಿದ ಅರ್ಜಿಯು ನ.23ಕ್ಕೆ ವಿಚಾರಣೆಗೆ ಬರಲಿದೆ. ಇದು ಅಂತಿಮ ವಿಚಾರಣೆಯಾದ್ದರಿಂದ, ಅಲ್ಲಿನ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರ ನೇತೃತ್ವದಲ್ಲಿ ಸೋಮವಾರ ಉನ್ನತ ಮಟ್ಟದ ಸಮಿತಿ ಸಭೆ ಕೂಡ ನಡೆಯಿತು.

1956ರ ರಾಜ್ಯ ಪುನರ್‌ ವಿಂಗಡಣಾ ಕಾಯ್ದೆಯನ್ನು ಪ್ರಶ್ನಿಸಿ ಮಹಾರಾಷ್ಟ್ರ ಸರ್ಕಾರ ಸುಪ್ರೀಂಕೋರ್ಟ್‌ ಮೊರೆ ಹೋಗಿದೆ. 2004ರಲ್ಲಿ ಸಲ್ಲಿಕೆಯಾದ ಅರ್ಜಿಯ ವಿಚಾರಣೆ 18 ವರ್ಷಗಳ ಬಳಿಕ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಪರ ಸಮರ್ಥ ವಾದ ಮಂಡಿಸಲು ಬೇಕಾದ ಪೂರ್ವ ಸಿದ್ಧತೆಗಳನ್ನೂ ಅಲ್ಲಿನ ಸರ್ಕಾರ ಮಾಡುತ್ತಿದೆ ಎನ್ನಲಾಗಿದೆ.

ಮಹಾರಾಷ್ಟ್ರದ ಉನ್ನತ ಶಿಕ್ಷಣ ಸಚಿವ ಚಂದ್ರಕಾಂತ ಪಾಟೀಲ ಹಾಗೂ ಅಬಕಾರಿ ಸಚಿವ ಶಂಭುರಾಜೇ ದೇಸಾಯಿ ಈ ಇಬ್ಬರನ್ನೂ ಗಡಿ ಉಸ್ತುವಾರಿ ಸಚಿವರಾಗಿಯೂ ನಿಯೋಜಿಸಲಾಗಿದೆ. ಬೆಳಗಾವಿ, ಬೀದರ, ಭಾಲ್ಕಿ, ಕಾರವಾರ ಸೇರಿದಂತೆ 865 ಹಳ್ಳಿಗಳು ಮಹಾರಾಷ್ಟ್ರಕ್ಕೆ ಸೇರಬೇಕು ಎಂಬುದು ಅವರ ವಾದವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT