ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಡಿ ವಿವಾದ ನಾಳೆ ವಿಚಾರಣೆ | ರಾಜ್ಯದ ಪರ ಸಮರ್ಥ ವಾದ ನಡೆಸುವ ಭರವಸೆ: ಬೊಮ್ಮಾಯಿ

Last Updated 29 ನವೆಂಬರ್ 2022, 6:34 IST
ಅಕ್ಷರ ಗಾತ್ರ

ನವದೆಹಲಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದ ಪ್ರಕರಣ ಇದೇ 30 ರಂದು ವಿಚಾರಣೆಗೆ ಬರಲಿದ್ದು, ಈ ಕುರಿತು ಹಿರಿಯ ವಕೀಲ ಮುಕುಲ್ ರೋಹಟಗಿ ಅವರು ಕರ್ನಾಟಕದ ಪರವಾಗಿ ಸಮರ್ಥವಾಗಿ ವಾದ ಮಾಡುವ ಭರವಸೆ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ನವದೆಹಲಿಯಲ್ಲಿ ಹಿರಿಯ ವಕೀಲ ಮುಕುಲ್ ರೋಹಟಗಿಅವರನ್ನು ಮಂಗಳವಾರ ಭೇಟಿಯಾದ ಬಳಿಕ ಮಾಧ್ಯಮಗಳಿಗೆ ಅವರು ಪ್ರತಿಕ್ರಿಯೆ ನೀಡಿದರು.

ಮುಕುಲ್ ರೋಹಟಗಿ ಹಿರಿಯ ವಕೀಲರಾಗಿದ್ದು, ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ಸಂಬಂಧಪಟ್ಟ ಹಾಗೆ ಈಗಾಗಲೇ ಎಲ್ಲ ವಿಷಯವನ್ನು ನಮ್ಮ ಅಡ್ವೋಕೇಟ್ ಜನರಲ್ ವಿವರಿಸಿದ್ದಾರೆ. ನಾನು ಗಡಿ ವಿವಾದದ ಕಾನೂನಾತ್ಮಕ ಹಿನ್ನೆಲೆ ಬಗ್ಗೆ ರೋಹಟಗಿ ಅವರಿಗೆ ವಿವರಣೆ ನೀಡಿದ್ದೇನೆ. ನಾಳೆ ಸುಪ್ರೀಂ ಕೋರ್ಟ್ ನಲ್ಲಿ ವಾದ ಮಂಡನೆ ಮಾಡಲು ಎಲ್ಲಾ ರೀತಿಯ ಸಿದ್ಧತೆ ನಡೆದಿದೆ ಎಂದು ಅವರು ತಿಳಿಸಿರುವುದಾಗಿ ಹೇಳಿದರು.

ಮಹಾರಾಷ್ಟ್ರ ಸರ್ಕಾರ ಹಾಕಿರುವ ಮೇಂಟೈನಬಲಿಟಿ ಕುರಿತಾಗಿ ವಿಚಾರಣೆ ನಡೆಯಲಿದೆ.

ಹಿಂದಿನ ಸಿಜೆಐ ದೀಪಕ್ ಮಿಶ್ರ ಅವರು ಇದರ ಮೇಂಟೈನಬಲಿಟಿ ವಿಚಾರವನ್ನು ಸಿದ್ದಪಡಿಸಿದ್ದರು. ಅದಕ್ಕೆ ನಮ್ಮ ಪ್ರತಿರೋಧ ಹೇಗಿರಬೇಕು ಎಂಬುದರ ಬಗ್ಗೆ ನಾವು ಸಿದ್ದರಾಗಿದ್ದೇವೆ ಎಂದು ತಿಳಿಸಿದರು.

ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡಿಗರಿರುವ ಮಹಾರಾಷ್ಟ್ರದ ಕೆಲವು ಗ್ರಾಮಸ್ಥರು ಕರ್ನಾಟಕಕ್ಕೆ ಸೇರಲು ನಿರ್ಧರಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ಹಳ್ಳಿಗಳು ಸೇರ್ಪಡೆಯಾಗಲು ನಿಯಮಗಳಿವೆ. ಜತ್ ತಾಲೂಕಿನ 42 ಗ್ರಾಮಸ್ಥರು ಸಿಎಂ ಭೇಟಿಗೆ ಅವಕಾಶ ಕೇಳಿರುವ ಬಗ್ಗೆ ಉತ್ತರಿಸಿ ಈ ಸಮಸ್ಯೆ ಇಂದು ನಿನ್ನೆಯದಲ್ಲ. ಸರಿಯಾದ ಸೌಲಭ್ಯ ದೊರಕದ ಹಿನ್ನಲೆಯಲ್ಲಿ ಅವರು ಈ ಹೇಳಿಕೆ ಬಹಳಷ್ಟು ವರ್ಷದಿಂದ‌ ನೀಡುತ್ತಿದ್ದಾರೆ. ಆದರೆ ವಿಚಾರ ಸುಪ್ರೀಂಕೋರ್ಟ್ ನಲ್ಲಿದ್ದು, ಸರ್ವ ಪಕ್ಷ ಸಭೆ ಕರೆದು ಚರ್ಚೆ ಮಾಡಲಾಗುವುದು. ಕಾನೂನು ಸಲಹೆ ಪಡೆದು ಮುಂದುವರೆಯುವುದಾಗಿ ತಿಳಿಸಿದರು.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಈ ಬಗ್ಗೆ ರಾಜಕೀಯವಾಗಿ ಹೇಳಿಕೆ ನೀಡಿದ್ದಾರೆ.

ಸಿದ್ದರಾಮಯ್ಯ ಸರ್ಕಾರ ಇದ್ದಾಗಲೇ ಕುಡಿಯುವ ‌ನೀರು ನೀಡುವ ನಿರ್ಣಯ ಮಾಡಿದ್ದರು. ಅವರು ಯಾಕೆ ಸೇರಿಸಿಕೊಂಡಿಲ್ಲ ಎಂದು ಪ್ರಶ್ನಿಸಿದರು. ಜವಬ್ದಾರಿಯುತ ಸ್ಥಾನ ದಲ್ಲಿದ್ದು ಎಲ್ಲವನ್ನೂ ಕಾನೂನು ಮತ್ತು ಸಂವಿಧಾನದ ಅಡಿಯಲ್ಲಿ ಕ್ರಮ‌ಕೈಗೊಳ್ಳಲಾಗುವುದು ಎಂದರು.

ದಾಳಿ ಪರಿಸ್ಥಿತಿ ನಿಯಂತ್ರಣದಲ್ಲಿದೆ
ರಾಜ್ಯ ಸಾರಿಗೆ ಸಂಸ್ಥೆ ಬಸ್ ಮೇಲೆ ದಾಳಿಯಾಗಿರುವ ಬಗ್ಗೆ ಪ್ರತಿಕ್ರಿಯಿಸಿ,ಮಹಾರಾಷ್ಟ್ರ ಗೃಹ ಇಲಾಖೆಗೆ ಜೊತೆಗೆ ಈಗಾಗಲೇ ರಾಜ್ಯದ ಅಧಿಕಾರಿಗಳು ಮಾತನಾಡಿದ್ದಾರೆ ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT