ಬುಧವಾರ, 31 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇಕೆದಾಟು ಯೋಜನೆಗೆ ಪ್ರಾಧಿಕಾರದ ಅನುಮತಿ ಅಗತ್ಯ: ಪ್ರಜ್ವಲ್‌ಗೆ ಶೆಖಾವತ್‌ ಉತ್ತರ

Last Updated 5 ಆಗಸ್ಟ್ 2021, 8:20 IST
ಅಕ್ಷರ ಗಾತ್ರ

ನವದೆಹಲಿ: ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಕರ್ನಾಟಕ‌ ಸಲ್ಲಿಸಿರುವ ಸಮಗ್ರ ಯೋಜನಾ ವರದಿ‌ (ಡಿಪಿಆರ್)ಗೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಮ್ಮತಿ ಅಗತ್ಯವಿದೆ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

ಲೋಕಸಭೆಯಲ್ಲಿ ಗುರುವಾರ ಪ್ರಶ್ನೋತ್ತರ ವೇಳೆಯಲ್ಲಿ, ಜೆಡಿಎಸ್ ಸದಸ್ಯ ಪ್ರಜ್ವಲ್ ರೇವಣ್ಣ ಕೇಳಿದ ಪ್ರಶ್ನೆಗೆ ಕೇಂದ್ರದ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಈ ಉತ್ತರ ನೀಡಿದರು.

ಡಿಪಿಆರ್‌ಗೆ ಕೇಂದ್ರ ಸರ್ಕಾರದಿಂದ ತಾತ್ವಿಕ ಒಪ್ಪಿಗೆ ನೀಡಲಾಗಿದೆ. ಆದರೆ, ಇದಕ್ಕೆ ಕಾವೇರಿ ಕಣಿವೆಯ ಕಣಿವೆಯ ಕೆಳಹಂತದ ರಾಜ್ಯಗಳ ಸಮ್ಮತಿ ಅಗತ್ಯವಿದೆ ಎಂದು ಅವರು ಹೇಳಿದರು.

‘ಕೆಳಹಂತದಲ್ಲಿರುವ ತಮಿಳುನಾಡು ಮತ್ತು ಪುದುಚೇರಿಗ ಸರ್ಕಾರಗಳ ಅನುಮತಿ ಪಡೆಯುವುದು ಅಗತ್ಯವಿದೆ ಎಂದು ಕರ್ನಾಟಕವು ಡಿಪಿಆರ್ ಸಲ್ಲಿಸಿದಾಗಲೇ ಸ್ಪಷ್ಟಪಡಿಸಲಾಗಿತ್ತು ಎಂದೂ ಅವರು ಹೇಳಿದರು.

ಡಿಪಿಆರ್‌ಗೆ ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯದ ಅನುಮತಿಯನ್ನೂ ನೀಡಲಾಗಿಲ್ಲ ಎಂದು ಶೆಖಾವತ್ ತಿಳಿಸಿದರು.

ಅರ್ಜಿ ಸಲ್ಲಿಸಿದ 6 ತಿಂಗಳೊಳಗೆ ಕೇಂದ್ರವು ಅನುಮತಿ ನೀಡದಿದ್ದರೆ, ತಾತ್ವಿಕ ಒಪ್ಪಿಗೆ ದೊರೆತಿದೆ ಎಂದು ಭಾವಿಸಬಹುದೇ? ಎಂಬ ಪ್ರಜ್ವಲ್ ಅವರ ಪೂರಕ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ತಾತ್ವಿಕ ಒಪ್ಪಿಗೆ ದೊರೆತಿದೆ ಎಂದು ಕರ್ನಾಟಕ ಭಾವಿಸಿದರೂ ಅದನ್ನ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಗಮನಕ್ಕೆ ತಂದು ಅನುಮತಿ ಪಡೆಯಬೇಕು ಎಂದು ಸ್ಪಷ್ಟಪಡಿಸಿದರು.

ಕರ್ನಾಟಕದ ಅರ್ಜಿಯ ಪರಿಶೀಲನೆಗೆ ಪರಿಸರ ಮತ್ತು ಅರಣ್ಯ ಸಚಿವಾಲಯಕ್ಕೆ ಸೂಚಿಸಲಾಗಿದ್ದು, ಈ ಸಂಬಂಧದ ದಾಖಲೆ ನಿರೀಕ್ಷಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT