ಭಾನುವಾರ, ಸೆಪ್ಟೆಂಬರ್ 26, 2021
28 °C

ಆಗಸ್ಟ್ 14 ವಿಭಜನೆಯ ಭಯಾನಕ ನೆನಪಿನ ದಿನ: ಮೋದಿ ಘೋಷಣೆಗೆ ಸುಧಾಕರ್ ಸ್ವಾಗತ

ಪ್ರಜಾವಾಣಿ ವೆಬ್ ಡೆಸ್ಕ್‌ Updated:

ಅಕ್ಷರ ಗಾತ್ರ : | |

ಬೆಂಗಳೂರು: ಆಗಸ್ಟ್ 14 ಅನ್ನು ‘ವಿಭಜನೆಯ ಭಯಾನಕ ನೆನಪಿನ ದಿನ’ವನ್ನಾಗಿ ಘೋಷಿಸಿದ ಪ್ರಧಾನಿ ನರೇಂದ್ರ ಮೋದಿ ಅವರ ನಡೆಯನ್ನು ಸಚಿವ ಕೆ. ಸುಧಾಕರ್ ಸ್ವಾಗತಿಸಿದ್ದಾರೆ.

‘ವಿಭಜನೆಯಿಂದಾಗಿ ರಾಷ್ಟ್ರವು ಅನುಭವಿಸಿದ ನೋವು ಮತ್ತು ಸಂಕಟವನ್ನು ಸ್ಮರಿಸಲು ಆಗಸ್ಟ್ 14 ಅನ್ನು ವಿಭಜನೆಯ ಭಯಾನಕ ನೆನಪಿನ ದಿನವನ್ನಾಗಿ ಘೋಷಿಸಿದ ಪ್ರಧಾನಿ ನರೇಂದ್ರ ಮೋದಿಯವರ ಕ್ರಮವನ್ನು ಸ್ವಾಗತಿಸುತ್ತೇನೆ. ವಿಭಜನೆಯು ದೇಶದ ಅತಿ ದೊಡ್ಡ ದುರಂತವಾಗಿದ್ದು, ಇದರಿಂದಾಗಿ ನಮ್ಮ ಅನೇಕ ಸಹೋದರ ಸಹೋದರಿಯರು ಸ್ಥಳಾಂತರಗೊಂಡು, ಅನೇಕರು ಮೃತಪಟ್ಟಿದ್ದರು’ ಎಂದು ಸುಧಾಕರ್ ಟ್ವೀಟ್ ಮಾಡಿದ್ದಾರೆ.

ಓದಿ: 

ಪ್ರಧಾನಿಯವರು ಟ್ವೀಟ್ ಮಾಡಿದ ಕೆಲವೇ ಕ್ಷಣಗಳಲ್ಲಿ ಸುಧಾಕರ್ ಕೂಡ ಟ್ವೀಟ್ ಮಾಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು