ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುತ್ರನಿಗೆ ಸಿಗದ ಮಂತ್ರಿ ಪಟ್ಟ: ಬಿಎಸ್‌ವೈ ಬೇಸರ?

ಬಿಎಸ್‌ವೈ ನೆರಳಿನಿಂದ ಹೊರ ಬರಲು ಬೊಮ್ಮಾಯಿಗೆ ಸೂಚನೆ
Last Updated 4 ಆಗಸ್ಟ್ 2021, 7:38 IST
ಅಕ್ಷರ ಗಾತ್ರ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ತಮ್ಮ ಪುತ್ರ ಬಿ.ವೈ.ವಿಜಯೇಂದ್ರ ಅವರಿಗೆ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಬೇಸರಗೊಂಡಿದ್ದಾರೆ.

ಮಂಗಳವಾರ ರಾತ್ರಿ ಬಹಳ ಹೊತ್ತಿನವರೆಗೆ ಬಸವರಾಜ ಬೊಮ್ಮಾಯಿ ಮೂಲಕ ತಮ್ಮ ಪುತ್ರನ ಪರವಾಗಿ ಒತ್ತಡ ಹೇರಿದ್ದ ಯಡಿಯೂರಪ್ಪ ಅವರು, ಬುಧವಾರ ಪಟ್ಟಿಯಲ್ಲಿ ಪುತ್ರನ ಹೆಸರು ಕಾಣಿಸಿಕೊಳ್ಳದ ಕಾರಣ ಬೇಸರಿಸಿಕೊಂಡಿದ್ದರು. ಇದೇ ಕಾರಣಕ್ಕೆ ಅವರು ದುಡುಕಿನ ಹೆಜ್ಜೆ ಹಾಕಬಾರದು ಎಂದು ವರಿಷ್ಠರು ಯಡಿಯೂರಪ್ಪ ಅವರ ಜತೆ ಸುಮಾರು ಒಂದು ಗಂಟೆಯಷ್ಟು ದೂರವಾಣಿ ಮೂಲಕ ಮಾತುಕತೆ ನಡೆಸಿ, ಸಮಾಧಾನಪಡಿಸಿದ್ದಾರೆ ಎಂದು ಮೂಲಗಳು ಹೇಳಿವೆ.

ಈ ಮಧ್ಯೆ ಸಚಿವ ಸ್ಥಾನ ಸಿಗದ ಅತೃಪ್ತ ಶಾಸಕರು ಯಡಿಯೂರಪ್ಪ ಅವರ ಮನೆಗೆ ಭೇಟಿ ನೀಡಲಾರಂಭಿದ್ದಾರೆ.

ನೂತನ ಮುಖ್ಯಮಂತ್ರಿ ಬೊಮ್ಮಾಯಿ ಅವರು ಯಡಿಯೂರಪ್ಪ ಅವರ ನೆರಳಿನಿಂದ ಕಳಚಿಕೊಂಡು ಸ್ವತಂತ್ರವಾಗಿ ಕಾರ್ಯ ನಿರ್ವಹಿಸಬೇಕು ಎಂದು ವರಿಷ್ಠರು ಸೂಚನೆ ನೀಡಿದ್ದಾರೆ. ಅವರ ನಿರ್ದೇಶನದ ಪ್ರಕಾರ ಬೊಮ್ಮಾಯಿ ಬೆಳಿಗ್ಗೆ ದೆಹಲಿಯಿಂದ ಮರಳಿದ ಬಳಿಕ ಯಡಿಯೂರಪ್ಪ ಅವರ ಮನೆಗೆ ಹೋಗದೇ ನೇರವಾಗಿ ವಿಧಾನಸೌಧಕ್ಕೆ ತೆರಳಿದರು. ಹಿಂದೆಲ್ಲ ಯಾವುದೇ ಕೆಲಸಕ್ಕೂ ಮೊದಲು ಯಡಿಯೂರಪ್ಪ ಅವರ ಮನೆಗೆ ಭೇಟಿ ನೀಡುತ್ತಿದ್ದರು. ಸಚಿವರ ಪಟ್ಟಿ ಬಿಡುಗಡೆ ಆದ ಬಳಿಕ ಮತ್ತು ಪ್ರಮಾಣ ವಚನ ಸ್ವೀಕಾರಕ್ಕೆ ಮೊದಲು ಕೆಲವು ಹಿರಿಯ ಶಾಸಕರ ಜತೆ ಯಡಿಯೂರಪ್ಪ ಅವರ ನಿವಾಸಕ್ಕೆ ಭೇಟಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT