ಪರಿಷತ್ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ, ವಿಜಯೇಂದ್ರಗೆ ನಿರಾಸೆ

ನವದೆಹಲಿ: ಕರ್ನಾಟಕದ ವಿಧಾನ ಸಭೆಯಿಂದ ವಿಧಾನ ಪರಿಷತ್ ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಹೈಕಮಾಂಡ್ ಮಂಗಳವಾರ ಬಿಡುಗಡೆ ಮಾಡಿದೆ. ಪಕ್ಷದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಟಿಕೆಟ್ ನಿರಾಕರಿಸಲಾಗಿದೆ.
ಲಕ್ಷ್ಮಣ ಸವದಿ, ಛಲವಾದಿ ನಾರಾಯಣಸ್ವಾಮಿ, ಕೇಶವಪ್ರಸಾದ್, ಹೇಮಲತಾ ನಾಯಕ್ ಅವರನ್ನು ಅಭ್ಯರ್ಥಿಗಳನ್ನಾಗಿ ಘೋಷಿಸಲಾಗಿದೆ.
ಶಿಕ್ಷಕರ ಕ್ಷೇತ್ರದದಿಂದ ಬಸವರಾಜ ಹೊರಟ್ಟಿ ಅವರನ್ನು ಕಣಕ್ಕಿಳಿಸಲಾಗಿದೆ.
ಕಾಂಗ್ರೆಸ್ ಪಕ್ಷವು ಅಭ್ಯರ್ಥಿಗಳ ಪಟ್ಟಿಯನ್ನು ಸೋಮವಾರ ಬಿಡುಗಡೆ ಮಾಡಿತ್ತು.
ವಿಧಾನಪರಿಷತ್: ಕಾಂಗ್ರೆಸ್ನಿಂದ ನಾಗರಾಜು ಯಾದವ್, ಅಬ್ದುಲ್ ಜಬ್ಬಾರ್ ಕಣಕ್ಕೆ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.