ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರಿಷತ್‌ ಚುನಾವಣೆ: ಟಿ.ಎ.ಶರವಣ ಜೆಡಿಎಸ್ ಅಭ್ಯರ್ಥಿ

Last Updated 24 ಮೇ 2022, 6:43 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕದ ವಿಧಾನ ಸಭೆಯಿಂದ ವಿಧಾನ ಪರಿಷತ್‌ ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಟಿ.ಎ.ಶರವಣ ಆಯ್ಕೆಯಾಗಿದ್ದಾರೆ.

ಅಭ್ಯರ್ಥಿಯಾಗಿ ಟಿ.ಎ.ಶರವಣ ಅವರನ್ನು ಆಯ್ಕೆ ಮಾಡಿರುವ ಬಗ್ಗೆ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ.ಇಬ್ರಾಹಿಂ ಮಂಗಳವಾರ ಘೋಷಣೆ ಮಾಡಿದ್ದಾರೆ.

ಇದರೊಂದಿಗೆ, ಶರವಣ ಅವರು ಎರಡನೇ ಬಾರಿಗೆ ಪರಿಷತ್ ಪ್ರವೇಶಿಸಲಿದ್ದಾರೆ.

ವಿಧಾನ ಪರಿಷತ್‌ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿಶರವಣ ಅವರು ಮಂಗಳವಾರ ನಾಮಪತ್ರ ಸಲ್ಲಿಸಿದರು. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ, ಸಿ.ಎಂ.ಇಬ್ರಾಹಿಂ ಇದ್ದರು.

ಬಿಜೆಪಿ ಹಾಗೂ ಕಾಂಗ್ರೆಸ್ ಈಗಾಗಲೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT