ಕೋಲಾರ: ಕೋಲಾರ ಮತ್ತು ಚಿಕ್ಕಬಳ್ಳಾಪುರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ರಾಜ್ಯ ವಿಧಾನ ಪರಿಷತ್ತಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂ.ಎಲ್.ಅನಿಲ್‌ಕುಮಾರ್ 441 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಅನಿಲ್‌ಕುಮಾರ್ 2,340 ಮತಗಳನ್ನು ಪಡೆದರೆ ಅವರ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಡಾ.ಕೆ.ಎನ್.ವೇಣುಗೋಪಾಲ್ 1,899 ಮತ ಗಳಿಸಿದರು. ಜೆಡಿಎಸ್ ಅಭ್ಯರ್ಥಿ ವಿ.ಇ.ರಾಮಚಂದ್ರ 1,438 ಮತ ಪಡೆದರು. ಪಕ್ಷೇತರ ಅಭ್ಯರ್ಥಿ ಎಂ.ಪಿ.ಅನಿಲ್‌ಕುಮಾರ್ 10 ಮತ ಗಳಿಸಿ ಠೇವಣಿ ಕಳೆದುಕೊಂಡರು.

ಅವಳಿ ಜಿಲ್ಲೆಯ ಒಟ್ಟು 5,600 ಮತದಾರರ ಪೈಕಿ 5,587 ಮಂದಿ ಮತ ಚಲಾಯಿಸಿದ್ದರು. ಈ ಪೈಕಿ 5,410 ಮತಗಳು ಸಿಂಧುವಾದವು. 177 ಮತಗಳು ತಿರಸ್ಕೃತಗೊಂಡವು. ಜಿಲ್ಲಾ ಕೇಂದ್ರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಮತ ಎಣಿಕೆ ನಡೆಯಿತು.

ಓದಿ:ಫಲಿತಾಂಶ | ಪಕ್ಷಗಳ ಬಲಾಬಲ: ಬಿಜೆಪಿ–10, ಕಾಂಗ್ರೆಸ್–11, ಜೆಡಿಎಸ್–01, ಇತರೆ–01

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.