ಶುಕ್ರವಾರ, ಮೇ 20, 2022
25 °C

ವಿಧಾನಪರಿಷತ್‌ ಫಲಿತಾಂಶ 2021: ಬಿರುಸುಗೊಂಡ ಮತಗಳ ಎಣಿಕೆ ಪ್ರಕ್ರಿಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್‌ನ 25 ಕ್ಷೇತ್ರಗಳಿಗೆ ಇದೇ 10 ರಂದು ನಡೆದ ಚುನಾವಣೆಯ ಮತಗಳ ಎಣಿಕೆ ಮಂಗಳವಾರ ಬೆಳಗ್ಗೆ ಆರಂಭವಾಯಿತು. 

ಬಿಜೆಪಿ, ಜೆಡಿಎಸ್‌ ಮತ್ತು ಕಾಂಗ್ರೆಸ್‌ನ ಪ್ರಮುಖ ನಾಯಕರ ಭವಿಷ್ಯ ಸಂಜೆಯ ವೇಳೆಗೆ ನಿರ್ಧಾರವಾಗಲಿದೆ. ರಾಜ್ಯದ 20 ಜಿಲ್ಲಾ ಕೇಂದ್ರಗಳಿಂದ ಫಲಿತಾಂಶ ಬರಲಿದೆ.

ಸಮಾಜ ಕಲ್ಯಾಣ ಸಚಿವ ಹಾಗೂ ಸಭಾನಾಯಕ ಕೋಟ ಶ್ರೀನಿವಾಸ ಪೂಜಾರಿ, ಉಪಸಭಾಪತಿ ಎಂ.ಕೆ.ಪ್ರಾಣೇಶ್‌, ಸರ್ಕಾರದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಅಗ್ನಿಪರೀಕ್ಷೆ ಎದುರಿಸಿದ್ದಾರೆ. ಬೊಮ್ಮಾಯಿ ಸರ್ಕಾರದಲ್ಲಿ ವಿಧಾನಪರಿಷತ್ತಿನ ಏಕೈಕ ಸಚಿವರಾಗಿರುವ ಶ್ರೀನಿವಾಸ ಪೂಜಾರಿ ಗೆಲುವು ಸಾಧಿಸಿದರೆ, ಸಭಾ ನಾಯಕರಾಗಿಯೇ ಮುಂದುವರೆಯಲಿದ್ದಾರೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್‌, ಪರಿಷತ್ತಿನ ಹಾಲಿ ಸದಸ್ಯ ಕಾಂಗ್ರೆಸ್‌ನ ಕೆ.ಸಿ.ಕೊಂಡಯ್ಯ, ಜೆಡಿಎಸ್‌ನ ಸೂರಜ್‌ ರೇವಣ್ಣ,  ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ತಮ್ಮ ಚನ್ನರಾಜ ಹಟ್ಟಿಹೊಳಿ, ಜಾರಕಿಹೊಳಿ ಕುಟುಂಬದ ಪಕ್ಷೇತರ ಅಭ್ಯರ್ಥಿ ಲಖನ್‌ ಜಾರಕಿಹೊಳಿ, ಬಿಜೆಪಿ ಶಾಸಕ ಜಗದೀಶ ಶೆಟ್ಟರ್ ತಮ್ಮ ಪ್ರದೀಪ ಶೆಟ್ಟರ್ ಕಣದಲ್ಲಿರುವ ಪ್ರಮುಖರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು