ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Live ಪರಿಷತ್‌ ಫಲಿತಾಂಶ: ಮೈಸೂರು–ಚಾಮರಾಜನಗರ: ಜೆಡಿಎಸ್‌ನ ಮಂಜೇಗೌಡಗೆ ಗೆಲುವು
LIVE

ರಾಜ್ಯದ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್‌ನ 25 ಕ್ಷೇತ್ರಗಳಿಗೆ ಇದೇ 10 ರಂದು ನಡೆದ ಚುನಾವಣೆಯ ಮತಗಳ ಎಣಿಕೆ ಇಂದು ನಡೆಯುತ್ತಿದೆ. ಬಿಜೆಪಿ ಮತ್ತು ಕಾಂಗ್ರೆಸ್‌ನ ಪ್ರಮುಖ ನಾಯಕರ ಭವಿಷ್ಯ ನಿರ್ಧಾರವಾಗಲಿದೆ. ಬೊಮ್ಮಾಯಿ ಸರ್ಕಾರದಲ್ಲಿ ವಿಧಾನಪರಿಷತ್ತಿನ ಏಕೈಕ ಸಚಿವರಾಗಿರುವ ಶ್ರೀನಿವಾಸ ಪೂಜಾರಿ ಗೆಲುವು ಸಾಧಿಸಿದ್ದಾರೆ.
Last Updated 14 ಡಿಸೆಂಬರ್ 2021, 16:20 IST
ಅಕ್ಷರ ಗಾತ್ರ
16:1914 Dec 2021

ಪರಿಷತ್ ಫಲಿತಾಂಶ: ಯಾರ ವಿರುದ್ಧವೂ ಅವಸರದ ಕ್ರಮ ಇಲ್ಲ ಎಂದ ಸಿಎಂ ಬೊಮ್ಮಾಯಿ

16:1814 Dec 2021

ಪರಿಷತ್ ಫಲಿತಾಂಶ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿ.ಕೆ.ಶಿವಕುಮಾರ್

 ‘ವಿಧಾನಪರಿಷತ್ ಚುನಾವಣೆಯು ಮುಂದಿನ ವಿಧಾನಸಭೆ ಚುನಾವಣೆಗೆ ದಿಕ್ಸೂಚಿಯಾಗಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದರು.

16:1714 Dec 2021

ಮೈಸೂರು–ಚಾಮರಾಜನಗರ ದ್ವಿಸದಸ್ಯ ಕ್ಷೇತ್ರದಲ್ಲಿ ಜೆಡಿಎಸ್‌ನ ಸಿ.ಎನ್‌.ಮಂಜೇಗೌಡ ಗೆಲುವು ಸಾಧಿಸಿದ್ದಾರೆ.

13:5414 Dec 2021

ಮೈಸೂರು ಚಾಮರಾಜನಗರ ದ್ವಿಸದಸ್ಯ ಕ್ಷೇತ್ರ- ಜೆಡಿಎಸ್ ಅಭ್ಯರ್ಥಿ ಮಂಜೇಗೌಡರ ಗೆಲುವಿನ ಸುಳಿವು ಸಿಗುತ್ತಿದ್ದಂತೆ ಮತ ಎಣಿಕೆ ಕೇಂದ್ರಕ್ಕೆ ಬಂದ ಶಾಸಕ ಸಾ.ರಾ.ಮಹೇಶ್...

13:1514 Dec 2021

ಮೈಸೂರು–ಚಾಮರಾಜನಗರ: ಗೆಲುವಿನತ್ತ ಜೆಡಿಎಸ್ ಅಭ್ಯರ್ಥಿ ಮಂಜೇಗೌಡ

ಮೈಸೂರು: ಮೈಸೂರು–ಚಾಮರಾಜನಗರ ದ್ವಿಸದಸ್ಯ ಕ್ಷೇತ್ರದ ದ್ವಿತೀಯ ಪ್ರಾಶಸ್ತ್ಯ ಮತಗಳ ಎಣಿಕೆ ಪ್ರಗತಿಯಲ್ಲಿದ್ದು,  ಜೆಡಿಎಸ್‌ ಅಭ್ಯರ್ಥಿ ಸಿ.ಎನ್‌.ಮಂಜೇಗೌಡ ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಆರ್‌.ರಘು (ಕೌಟಿಲ್ಯ) ಅವರು ಒತ್ತಡದಲ್ಲಿ ಅತ್ತಿಂದಿತ್ತ ಓಡಾಡುತ್ತಿದ್ದಾರೆ.

ಮೊದಲ ಪ್ರಾಶಸ್ತ್ಯ ಮತ ಎಣಿಕೆಯಲ್ಲಿ ರಘು 1,919 ಮತಗಳೊಂದಿಗೆ ಮುನ್ನಡೆ ಹೊಂದಿದ್ದರು. ಮಂಜೇಗೌಡ 1,780 ಮತ ಪಡೆದಿದ್ದರು. ಆದರೆ, ದ್ವಿತೀಯ ಪ್ರಾಶಸ್ತ್ಯದ ಮತಗಳು ಮಂಜೇಗೌಡರಿಗೆ ಹೆಚ್ಚು ಲಭಿಸಿವೆ. ಸದ್ಯ 42 ಮತಗಳಿಂದ ಮುಂದಿದ್ದಾರೆ. ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್‌ ಅವರೇ ಖುದ್ದಾಗಿ ಮತ ಎಣಿಕೆಯಲ್ಲಿ ತೊಡಗಿದ್ದು, ಇತರ ಸಿಬ್ಬಂದಿ ಸಹಕರಿಸುತ್ತಿದ್ದಾರೆ. ಇನ್ನೂ ಅಧಿಕೃತವಾಗಿ ಫಲಿತಾಂಶ ಘೋಷಿಸಿಲ್ಲ.

ಕ್ಷೇತ್ರದಿಂದ ಇಬ್ಬರು ಅಭ್ಯರ್ಥಿಗಳು ಆಯ್ಕೆಯಾಗಲಿದ್ದು, ಗೆಲುವಿಗಾಗಿ 2,195 ಮತಗಳ ಕೋಟಾ ನಿಗದಿಪಡಿಸಲಾಗಿದೆ. ಕಾಂಗ್ರೆಸ್‌ ಅಭ್ಯರ್ಥಿ ಡಾ.ಡಿ.ತಿಮ್ಮಯ್ಯ ಅವರು 2,865  ಮತ ಪಡೆದು ಮೊದಲ ಪ್ರಾಶಸ್ತ್ಯ ಮತಗಳಲ್ಲೇ ಗೆಲುವು ಸಾಧಿಸಿದ್ದಾರೆ. 
 
ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ಮತ ಎಣಿಕೆ ನಡೆಯುತ್ತಿದ್ದು, ಜೆಡಿಎಸ್ ಪಕ್ಷದ ಕಾರ್ಯಕರ್ತರು ಸಂಭ್ರಮಿಸುತ್ತಿದ್ದಾರೆ.

13:1314 Dec 2021

ವಿಜಯಪುರದಲ್ಲಿ ಬಿಜೆಪಿ ಅಭ್ಯರ್ಥಿ ಪಿ.ಎಚ್.ಪೂಜಾರಗೆ ಗೆಲುವು

12:1614 Dec 2021

ಕಾಂಗ್ರೆಸ್‌ ಅಭ್ಯರ್ಥಿ ಅನಿಲ್‌ಕುಮಾರ್‌ ಗೆಲುವು

ಕೋಲಾರ: ಕೋಲಾರ ಮತ್ತು ಚಿಕ್ಕಬಳ್ಳಾಪುರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ರಾಜ್ಯ ವಿಧಾನ ಪರಿಷತ್ತಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಎಂ.ಎಲ್‌.ಅನಿಲ್‌ಕುಮಾರ್ 441 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಅನಿಲ್‌ಕುಮಾರ್‌ 2,340 ಮತಗಳನ್ನು ಪಡೆದರೆ ಅವರ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಡಾ.ಕೆ.ಎನ್‌.ವೇಣುಗೋಪಾಲ್‌ 1,899 ಮತ ಗಳಿಸಿದರು. ಜೆಡಿಎಸ್‌ ಅಭ್ಯರ್ಥಿ ವಿ.ಇ.ರಾಮಚಂದ್ರ 1,438 ಮತ ಪಡೆದರು. ಪಕ್ಷೇತರ ಅಭ್ಯರ್ಥಿ ಎಂ.ಪಿ.ಅನಿಲ್‌ಕುಮಾರ್‌ 10 ಮತ ಗಳಿಸಿ ಠೇವಣಿ ಕಳೆದುಕೊಂಡರು.
ಅವಳಿ ಜಿಲ್ಲೆಯ ಒಟ್ಟು 5,600 ಮತದಾರರ ಪೈಕಿ 5,587 ಮಂದಿ ಮತ ಚಲಾಯಿಸಿದ್ದರು. ಈ ಪೈಕಿ 5,410 ಮತಗಳು ಸಿಂಧುವಾದವು. 177 ಮತಗಳು ತಿರಸ್ಕೃತಗೊಂಡವು. ಜಿಲ್ಲಾ ಕೇಂದ್ರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಮತ ಎಣಿಕೆ ನಡೆಯಿತು.

12:1014 Dec 2021

ಮೈಸೂರು–ಚಾಮರಾಜನಗರ: ಮುಗಿಯದ ಮತ ಎಣಿಕೆ–ರಘು, ಮಂಜೇಗೌಡ ನಡುವೆ ತೀವ್ರ ಪೈಪೋಟಿ

ಮೈಸೂರು: ಮೈಸೂರು–ಚಾಮರಾಜನಗರ ದ್ವಿಸದಸ್ಯ ಕ್ಷೇತ್ರದ ದ್ವಿತೀಯ ಪ್ರಾಶಸ್ತ್ಯ ಮತಗಳ ಎಣಿಕೆ ಪ್ರಗತಿಯಲ್ಲಿದ್ದು, ಬಿಜೆಪಿ ಅಭ್ಯರ್ಥಿ ಆರ್‌.ರಘು (ಕೌಟಿಲ್ಯ) ಹಾಗೂ ಜೆಡಿಎಸ್‌ ಅಭ್ಯರ್ಥಿ ಸಿ.ಎನ್‌.ಮಂಜೇಗೌಡ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.

ಮೊದಲ ಪ್ರಾಶಸ್ತ್ಯ ಮತ ಎಣಿಕೆಯಲ್ಲಿ ರಘು 1,919 ಮತಗಳೊಂದಿಗೆ ಮುನ್ನಡೆ ಹೊಂದಿದ್ದರು. ಮಂಜೇಗೌಡ 1,780 ಮತ ಪಡೆದಿದ್ದರು. ಆದರೆ, ದ್ವಿತೀಯ ಪ್ರಾಶಸ್ತ್ಯದ ಮತಗಳು ಮಂಜೇಗೌಡರಿಗೆ ಹೆಚ್ಚು ಸಿಗುತ್ತಿವೆ. ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್‌ ಅವರೇ ಖುದ್ದಾಗಿ ಮತ ಎಣಿಕೆಯಲ್ಲಿ ತೊಡಗಿದ್ದು, ಇತರ ಸಿಬ್ಬಂದಿ ಸಹಕರಿಸುತ್ತಿದ್ದಾರೆ. 
ಕ್ಷೇತ್ರದಿಂದ ಇಬ್ಬರು

ಅಭ್ಯರ್ಥಿಗಳು ಆಯ್ಕೆಯಾಗಲಿದ್ದು, ಗೆಲುವಿಗಾಗಿ 2,195 ಮತಗಳ ಕೋಟಾ ನಿಗದಿಪಡಿಸಲಾಗಿದೆ. ಕಾಂಗ್ರೆಸ್‌ ಅಭ್ಯರ್ಥಿ ಡಾ.ಡಿ.ತಿಮ್ಮಯ್ಯ ಅವರು 2,865  ಮತ ಪಡೆದು ಮೊದಲ ಪ್ರಾಶಸ್ತ್ಯ ಮತಗಳಲ್ಲೇ ಗೆಲುವು ಸಾಧಿಸಿದ್ದಾರೆ. 
 
ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ಮತ ಎಣಿಕೆ ನಡೆಯುತ್ತಿದ್ದು, ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರು ಸಂಭ್ರಮಿಸುತ್ತಿದ್ದಾರೆ.

10:4414 Dec 2021

ವಿಧಾನ ಪರಿಷತ್ ಫಲಿತಾಂಶ: ಇಲ್ಲಿದೆ ಪಕ್ಷಗಳ ಬಲಾಬಲ

10:4214 Dec 2021

ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿಗೆ ಗೆಲುವು. ಅಧಿಕೃತ ಘೋಷಣೆ ಬಾಕಿ

ಬೆಳಗಾವಿಯಲ್ಲಿ ಎರಡನೇ ಸ್ಥಾನಕ್ಕಾಗಿ ನಡೆದ ಹಣಾಹಣಿಯಲ್ಲಿ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿಗೆ ಗೆಲುವು. ಅಧಿಕೃತ ಘೋಷಣೆ ಬಾಕಿ.

ಬಿಜೆಪಿಯ ಮಹಾಂತೇಶ ಕವಟಗಿಮಠ ಅವರಿಗೆ ಸೋಲು.