ಸುರತ್ಕಲ್: ಯುವಕ ಮಹಮ್ಮದ್ ಫಾಝಿಲ್ ಹತ್ಯೆ ಪ್ರಕರಣದ ಆರೋಪಿಗಳನ್ನು ಶೀಘ್ರವೇ ಬಂಧಿಸುತ್ತೇವೆ ಎಂದು ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಪ್ರಾಥಮಿಕ ತನಿಖೆಯಲ್ಲಿ ಆರೋಪಿಗಳ ಸುಳಿವು ಸಿಕ್ಕಿದೆ. ವಿಶೇಷ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗುವುದು. ಯಾರು ಕೂಡ ವದಂತಿಗಳಿಗೆ ಕಿವಿಗೊಡಬಾರದು. ಫಾಝಿಲ್ ಮನೆಯವರಿಂದಲೂ ಮಾಹಿತಿ ಪಡೆಯಲಾಗಿದೆ. ವಿವಿಧ ಆಯಾಮಗಳಿಂದ ಪ್ರಕರಣದ ತನಿಖೆ ನಡೆಸಲಾಗುತ್ತಿದೆ ಎಂದರು.
ಸಿಸಿಟಿವಿ ಕ್ಯಾಮೆರಾ ದೃಶ್ಯ ಆಧರಿಸಿ ಕಾರು ಪತ್ತೆ ಹಚ್ಚಿ ತನಿಖೆ ನಡೆಸುತ್ತಿದ್ದೇವೆ. ಯಾವುದೇ ಕಾರಣಕ್ಕೂ ಯಾರೂ ಕಾನೂನು ಕೈಗೆತ್ತಿಕೊಳ್ಳಬಾರದು. ಗಡಿಭಾಗದಲ್ಲಿ ವಾಹನಗಳನ್ನ ಚೆಕ್ ಮಾಡಲಾಗುತ್ತಿದ್ದು, ಸಾರ್ವಜನಿಕರು ಪೊಲೀಸರಿಗೆ ಸಹಕಾರ ನೀಡಬೇಕು ಎಂದು ಅಲೋಕ್ ಕುಮಾರ್ ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.