ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಸವರಾಜ ಬೊಮ್ಮಾಯಿ ಪ್ರಮಾಣವಚನ LIVE | ವಾರದಲ್ಲೇ ಸಂಪುಟ ವಿಸ್ತರಣೆ: ಕಟೀಲ್
LIVE

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರು ಪ್ರಮಾಣವಚನ ಸ್ವೀಕರಿಸಿದರು. ಪ್ರಮಾಣವಚನ ಸ್ವೀಕಾರ ಸಮಾರಂಭ ಹಾಗೂ ಸಂಬಂಧಿತ ರಾಜಕೀಯ ಚಟುವಟಿಕೆಗಳ ಲೈವ್ ಅಪ್‌ಡೇಟ್ಸ್ ಇಲ್ಲಿ ಲಭ್ಯ.
Last Updated 28 ಜುಲೈ 2021, 5:58 IST
ಅಕ್ಷರ ಗಾತ್ರ
05:5628 Jul 2021

ಸಂಪುಟ ರಚನೆ ಸಿಎಂ ವಿವೇಚನಾ ಅಧಿಕಾರವಾಗಿದೆ. ಪಕ್ಷದ ವರಿಷ್ಠರ ಜತೆ ಚರ್ಚಿಸಿ ವಾರದಲ್ಲೇ ಸಂಪುಟ ವಿಸ್ತರಣೆ ನಡೆಸಲಾಗುವುದು. ವಲಸಿಗರು, ಮೂಲ ಎಂಬ ಪ್ರಶ್ನೆಯೇ ಇಲ್ಲ. ಪ್ರಾದೇಶಿಕತೆ, ಸಾಮಾಜಿಕ ನ್ಯಾಯ ಎಲ್ಲವನ್ನೂ ಪರಿಶೀಲಿಸಿ ಸಂಪುಟದಲ್ಲಿ ಸ್ಥಾನ ನೀಡಲಾಗುವುದು: ನಳಿನ್ ಕುಮಾರ್ ಕಟೀಲ್

05:3528 Jul 2021

ಮಾಜಿ ಸಚಿವರು, ಶಾಸಕರು, ಬಿಜೆಪಿ ಮುಖಂಡರು ತಂಡೋಪತಂಡವಾಗಿ ಬಂದು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಅಭಿನಂದಿಸುತ್ತಿದ್ದಾರೆ.

05:3428 Jul 2021

ವೇದಿಕೆಗೆ ಬಂದು ಹೂಗುಚ್ಛ ನೀಡಿ ಬಸವರಾಜ ಬೊಮ್ಮಾಯಿ ಅವರನ್ನು ಅಭಿನಂದಿಸಿದ  ಬಿ.ಎಸ್. ಯಡಿಯೂರಪ್ಪ

05:3328 Jul 2021

ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಹೂಗುಚ್ಛ ನೀಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಅಭಿನಂದಿಸಿದರು

05:3128 Jul 2021

ಪ್ರಮಾಣವಚನ ಸ್ವೀಕರಿಸಿದ ಬಳಿಕ ಕಡತಕ್ಕೆ ಸಹಿ ಮಾಡುತ್ತಿರುವ ನೂತನ ಮುಖ್ಯಮಂತ್ರಿ

05:2928 Jul 2021

ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರಮಾಣವಚನ ಸ್ವೀಕಾರ

‘ಬಸವರಾಜ ಬೊಮ್ಮಾಯಿ ಎಂಬ ಹೆಸರಿನ ನಾನು ಕಾನೂನಿನ ಮೂಲಕ ಸ್ಥಾಪಿತ ಭಾರತ ಸಂವಿಧಾನದ ವಿಷಯದಲ್ಲಿ ನಿಜವಾದ ಶ್ರದ್ಧೆ ಮತ್ತು ನಿಷ್ಠೆ ಹೊಂದಿರುತ್ತೇನೆಂದು, ಭಾರತದ ಸಾರ್ವಭೌಮತ್ವ ಮತ್ತು ಅಖಂಡತೆಯನ್ನು ಎತ್ತಿಹಿಡಿಯುತ್ತೇನೆಂದು, ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ನನ್ನ ಕರ್ತವ್ಯಗಳನ್ನು ಶ್ರದ್ಧಾಪೂರ್ವಕವಾಗಿ ಮತ್ತು ಅಂತಃಕರಣಪೂರ್ವಕವಾಗಿ ನೆರವೇರಿಸುತ್ತೇನೆಂದು, ಭಯ ಅಥವಾ ಪಕ್ಷಪಾತವಿಲ್ಲದೆ, ರಾಗ–ದ್ವೇಷವಿಲ್ಲದೆ ಎಲ್ಲರಿಗೂ ನ್ಯಾಯ ಒದಗಿಸಿಕೊಡುತ್ತೇನೆಂದು ದೇವರ ಹೆಸರಿನಲ್ಲಿ ಪ್ರಮಾಣ ಮಾಡುತ್ತೇನೆ’ ಎಂದು ಪ್ರಮಾಣವಚನ ಸ್ವೀಕರಿಸಿದ ಬೊಮ್ಮಾಯಿ

05:2328 Jul 2021

ನಿರ್ಗಮಿತ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಮಾರಂಭದ ಸ್ಥಳಕ್ಕೆ ತಲುಪಿದ್ದಾರೆ. ಗೋವಿಂದ ಕಾರಜೋಳ ಅವರೂ ಜತೆಗಿದ್ದಾರೆ

05:2228 Jul 2021

ಮಾಜಿ ಸಚಿವರಾದ ಕೆ.ಎಸ್. ಈಶ್ವರಪ್ಪ, ಮುರುಗೇಶ ನಿರಾಣಿ, ಡಾ.ಸಿ.ಎನ್. ಅಶ್ವತ್ಥನಾರಾಯಣ ಕೂಡ ಸಮಾರಂಭದಲ್ಲಿ ಭಾಗಿ

05:1828 Jul 2021

ರಾಜಭವನದ ಗಾಜಿನ ಮನೆ ತಲುಪಿದ ನಿಯೋಜಿತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

05:1728 Jul 2021

‘ಕಳೆದ ಎರಡು ವರ್ಷದಿಂದ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರಿಪಡಿಸಲಿ' –  ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆ