ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲಾ ಉಸ್ತುವಾರಿ ಸಚಿವರ ಮರು ನೇಮಿಸಿ ಸರ್ಕಾರ ಆದೇಶ

Last Updated 7 ಮೇ 2021, 6:17 IST
ಅಕ್ಷರ ಗಾತ್ರ

ಬೆಂಗಳೂರು: ಜಿಲ್ಲಾ ಉಸ್ತುವಾರಿ ಸಚಿವರ ಮರು ನೇಮಕ ಮಾಡಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಆದೇಶ ಹೊರಡಿಸಿದ್ದಾರೆ.

ಸಚಿವರಾದ ಅರವಿಂದ ಲಿಂಬಾವಳಿ, ಪ್ರಭು ಚವ್ಹಾಣ ಹಾಗೂ ಆರ್. ಶಂಕರ್ ಅವರಿಗೆ ಈ ಕೆಳಗಿನಂತೆ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದ ವರೆಗೆ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಿ ಆದೇಶಿಸಿದೆ.

ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಅರವಿಂದ ಲಿಂಬಾವಳಿ ಅವರಿಗೆ ಕೋಲಾರ ಜಿಲ್ಲೆಯ ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ.

ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ ಅವರಿಗೆ ಬೀದರ್ ಜಿಲ್ಲೆಯ ಉಸ್ತುವಾರಿ ಜವಾಬ್ದಾರಿಯನ್ನು ವಹಿಸಿಕೊಡಲಾಗಿದೆ.

ಹಾಗೆಯೇ ತೋಟಗಾರಿಕೆ ಮತ್ತು ರೇಷ್ಮೆ ಸಚಿವರಾದ ಆರ್. ಶಂಕರ್ ಅವರಿಗೆ ಯಾದಗಿರಿ ಜಿಲ್ಲೆಯ ಉಸ್ತುವಾರಿ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT