ಬೆಂಗಳೂರು: ರಾಜ್ಯದ ಪ್ರವಾಸೋದ್ಯಮವನ್ನು ದೇಶದಲ್ಲೇ ಮೊದಲ ಸ್ಥಾನಕ್ಕೆ ಒಯ್ಯುವ ಉದ್ದೇಶದ ‘ಪ್ರವಾಸೋದ್ಯಮ ಹೊಸ ಕರಡು ನೀತಿ 2020–25’ ಕ್ಕೆ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆ ಒಪ್ಪಿಗೆ ನೀಡಿದೆ.

ಈ ನೀತಿಯಲ್ಲಿ ಸ್ಥಳೀಯರಿಗೆ ಉದ್ಯೋಗದಲ್ಲಿ ಆದ್ಯತೆ, ಪ್ರವಾಸಿಗರಿಗೆ ಸುರಕ್ಷತೆ, ವಿಶ್ವಾಸಾರ್ಹತೆ, ನೈರ್ಮಲ್ಯ, ಮೂಲಸೌಕರ್ಯಗಳ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. ದೇಶ ಮತ್ತು ವಿದೇಶಗಳ ಹೆಚ್ಚಿನ ಪ್ರವಾಸಿಗರನ್ನು ಆಕರ್ಷಿಸಿ ಪ್ರವಾಸೋದ್ಯಮದಲ್ಲಿ 3ನೇ ಸ್ಥಾನದಲ್ಲಿರುವ ಕರ್ನಾಟಕವನ್ನು ಒಂದನೇ ಸ್ಥಾನಕ್ಕೆ ತರಬೇಕು ಎಂಬ ನಿಟ್ಟಿನಲ್ಲಿ ನೀತಿ ರೂಪಿಸಲಾಗಿದೆ ಎಂದು ಸಚಿವ ಸಿ.ಟಿ.ರವಿ ತಿಳಿಸಿದರು.

ಈ ನೀತಿಯು ಪರಂಪರೆ, ವನ್ಯಜೀವಿ, ಅಧ್ಯಾತ್ಮ, ಸಂಸ್ಕೃತಿ, ಸಾಹಸ, ಕರಾವಳಿ, ಪ್ರಕೃತಿ, ಆರೋಗ್ಯ, ಕೃಷಿ, ಪ್ರವಾಸಿ ತಾಣಗಳ ಅಭಿವೃದ್ಧಿ, ಮೂಲಸೌಕರ್ಯಗಳಿಗೆ ಒತ್ತು, ಬಂಡವಾಳ ಹೂಡಿಕೆಗೆ ಆದ್ಯತೆಯೂ ಸೇರಿ ಹಲವು ಅಂಶಗಳನ್ನು ಒಳಗೊಂಡಿದೆ ಎಂದರು.

ಕೋವಿಡ್ನಿಂದ ಪ್ರವಾಸೋದ್ಯಮ ಕ್ಷೇತ್ರಕ್ಕೆ ಹಿನ್ನಡೆ ಆಗಿದೆ. ಆದರೂ ಪ್ರವಾಸಿಗರನ್ನು ಆಕರ್ಷಿಸಲು ಆಧುನಿಕ ತಂತ್ರಜ್ಞಾನ ಬಳಕೆಯೂ ಸೇರಿ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.