ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇರಳದಿಂದ ರಾಜ್ಯಕ್ಕೆ ಬರುವವರಿಗೆ ಒಂದು ವಾರ ಸಾಂಸ್ಥಿಕ ಕ್ವಾರಂಟೈನ್‌

Last Updated 30 ಆಗಸ್ಟ್ 2021, 15:17 IST
ಅಕ್ಷರ ಗಾತ್ರ

ಬೆಂಗಳೂರು: ಕೇರಳದಿಂದ ರಾಜ್ಯಕ್ಕೆ ಬರುವ ಎಲ್ಲರಿಗೂ ಒಂದು ವಾರಗಳ ಕಾಲ ಸಾಂಸ್ಥಿಕ ಕ್ವಾರಂಟೈನ್‌ ಕಡ್ಡಾಯಗೊಳಿಸಲಾಗುವುದು ಎಂದು ಕಂದಾಯ ಸಚಿವ ಆರ್‌. ಅಶೋಕ ಹೇಳಿದರು.

ಕೇರಳದಲ್ಲಿ ಓಣಂ ಆಚರಣೆಗೆ ಅವಕಾಶ ನೀಡಿದ್ದರಿಂದ ಕೋವಿಡ್‌ ಜಾಸ್ತಿಯಾಗಿದೆ ಎಂಬ ಅಭಿಪ್ರಾಯವಿದೆ ಎಂದು ಕಂದಾಯ ಸಚಿವ ಆರ್‌. ಅಶೋಕ ಹೇಳಿದರು. ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ನೀಡಬೇಕೆಂಬ ಬೇಡಿಕೆ ಸಂಬಂಧ ತಜ್ಞರು ಹಾಗೂ ಕೋವಿಡ್‌ ತಾಂತ್ರಿಕ ಸಲಹಾ ಸಮಿತಿ ಸದಸ್ಯರ ಸಲಹೆ ಪಡೆದು ತೀರ್ಮಾನಿಸಲಾಗುವುದು ಎಂದರು.

ಕೋವಿಡ್‌ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿರುವ ಕೊಡಗು, ಹಾಸನ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮಾತ್ರ ವಾರಾಂತ್ಯದ ಕರ್ಫ್ಯೂ ಮುಂದುವರಿಯಲಿದೆ. ಉಳಿದ ಜಿಲ್ಲೆಗಳಲ್ಲಿ ಈ ನಿರ್ಬಂಧ ಸಡಿಲಿಸಲಾಗುವುದು ಎಂದು ತಿಳಿಸಿದರು.

ರಾತ್ರಿ ಕರ್ಫ್ಯೂ ರಾತ್ರಿ 9ರಿಂದ ಬೆಳಿಗ್ಗೆ 5ರವರೆಗೆ ಯಥಾಸ್ಥಿತಿ ಇರಲಿದೆ. 2,912 ಗ್ರಾ. ಪಂ.ಗಳ ವ್ಯಾಪ್ತಿಯಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಶೂನ್ಯ ಇದೆ.

ಕಲ್ಯಾಣ ಮಂಟಪ ತೆರೆಯಲು ಅನುಮತಿ: ಕಲ್ಯಾಣ ಮಂಟಪಗಳಲ್ಲಿ ಮದುವೆ ಮತ್ತಿತರ ಸಮಾರಂಭ ನಡೆಸಲು ಅನುಮತಿ ನೀಡಲಾಗಿದೆ. ಗರಿಷ್ಠ 400 ಜನರ ಮಿತಿಗೆ ಒಳಪಟ್ಟು, ಶೇಕಡ 50ರಷ್ಟು ಜನರಿಗೆ ಅವಕಾಶ ಕಲ್ಪಿಸಿ ಸಭೆ, ಸಮಾರಂಭಗಳನ್ನು ನಡೆಸಲು ಒಪ್ಪಿಗೆ ನೀಡಲಾಗುವುದು ಎಂದು ಪ್ರಕಟಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT