ಸೋಮವಾರ, ಜೂನ್ 21, 2021
27 °C

ಕೋವಿಡ್ 3ನೇ ಅಲೆ: ದೇವಿಪ್ರಸಾದ್‌ ಶೆಟ್ಟಿ ನೇತೃತ್ವದ ಕಾರ್ಯಪಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ರಾಜ್ಯದಲ್ಲಿ ಕೋವಿಡ್‌ನ ಸಂಭಾವ್ಯ ಮೂರನೇ ಅಲೆ ಎದುರಿಸಲು ಸಿದ್ಧತೆಗಾಗಿ ಹೃದ್ರೋಗ ತಜ್ಞ ಡಾ.ದೇವಿ
ಪ್ರಸಾದ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಕಾರ್ಯಪಡೆ ರಚಿಸಲಾಗುವುದು’ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ‘ಸಮಿತಿಗೆ ಸದಸ್ಯರನ್ನು ಶೀಘ್ರದಲ್ಲಿ ನೇಮಿಸಲಾಗುವುದು. ರಾಜ್ಯದಲ್ಲಿ ಲಸಿಕೆ ಕಾರ್ಯತಂತ್ರದ ಸಲಹೆಗಾರರಾಗಿ ವೆಲ್ಲೂರಿನ ಕ್ರಿಶ್ಚಿಯನ್ ವೈದ್ಯಕೀಯ ಕಾಲೇಜಿನ ಮೈಕ್ರೋ ಬಯಾಲಜಿ ಪ್ರಾಧ್ಯಾಪಕ ಗಗನ್‍ದೀಪ್ ಕಾಂಗ್‌ ಅವರನ್ನು ನೇಮಿಸಲಾಗುವುದು’ ಎಂದರು.

‘ಕಾಂಗ್‌ ಅವರು ಲಸಿಕೆಗಳ ಸಂಶೋಧನೆ ಮತ್ತು ಅವುಗಳ ಬಳಕೆ ಕುರಿತಂತೆ ವಿಶ್ವ ಆರೋಗ್ಯ ಸಂಸ್ಥೆ ರಚಿಸಿರುವ ಸಲಹಾ ಸಮಿತಿಗಳ ಸದಸ್ಯರಾಗಿಯೂ ಕೆಲಸ ಮಾಡಿದ್ದಾರೆ’ ಎಂದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು