ಸೋಮವಾರ, ಸೆಪ್ಟೆಂಬರ್ 26, 2022
20 °C

ರಾಜಕೀಯ ಪಕ್ಷಗಳ ಇಬ್ಭಾಗ, ಧಾರ್ಮಿಕ ಸಂಘರ್ಷ ಮತ್ತಷ್ಟು ಉಲ್ಬಣ: ಕೋಡಿಮಠ ಸ್ವಾಮೀಜಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಆನವಟ್ಟಿ: ‘ಮುಂಬರುವ ದಿನಗಳಲ್ಲಿ ರಾಜಕೀಯ ಪಕ್ಷಗಳು ಇಬ್ಭಾಗವಾಗುವ ಸಂಭವವಿದೆ’ ಎಂದು ಹಾರನಹಳ್ಳಿ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದರು.

ಜಡೆ ಸಂಸ್ಥಾನ ಮಠದ ಕುಮಾರ ಕಂಪಿನ ಸಿದ್ಧವೃಷಭೇಂದ್ರ ಕರ್ತೃ ಗದ್ದುಗೆಯ ಶಿಲಾಮಯ ಕಟ್ಟಡದ ಕಾಮಗಾರಿಯನ್ನು ವೀಕ್ಷಿಸಿ, ಗದ್ಗುಗೆಯ ದರ್ಶನ ಪಡೆದು ಮಾತನಾಡಿದರು.

‘ನಾಡಿನಲ್ಲಿ ಬೆಂಕಿ ಅನಾಹುತ, ಅಕಾಲಿಕ ಮಳೆಯಂತಹ ಪ್ರಾಕೃತಿಕ ವಿಕೋಪಗಳು ಹೆಚ್ಚಾಗಲಿವೆ. ಶುಭ ನಾಮ ಸಂವತ್ಸರವು ದೇಶದಲ್ಲಿ ಅಶುಭವನ್ನು ಉಂಟು ಮಾಡಲಿದೆ. ನೈಜ ಜ್ಞಾನದ ಕೊರತೆಯಿಂದ ಮತಾಂಧತೆಯ ಧಾರ್ಮಿಕ ಸಂಘರ್ಷಗಳು ಮುಂದಿನ ದಿನಗಳಲ್ಲಿ ಮತ್ತಷ್ಟು ಉಲ್ಬಣ ಗೊಳ್ಳಲಿವೆ’ ಎಂದು ತಿಳಿಸಿದರು.

ಜಡೆ ಮಠದ ಡಾ.ಮಹಾಂತ ಸ್ವಾಮೀಜಿ, ಶಂತಪುರ ಮಠದ ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು