ಬುಧವಾರ, ನವೆಂಬರ್ 30, 2022
17 °C

ವಚನ ಭ್ರಷ್ಟತೆ: ಸಿದ್ದರಾಮಯ್ಯ ವಿರುದ್ಧ ಶ್ರೀರಾಮುಲು ಟೀಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮೂಲಕ ₹160 ಕೋಟಿ ಖರ್ಚು ಮಾಡಿ ನಡೆಸಿದ ಸಾಮಾಜಿಕ, ಶೈಕ್ಷಣಿಕ, ಅರ್ಥಿಕ ಸಮೀಕ್ಷೆ ಬಹಿರಂಗ ಮಾಡದೇ ಕಸದ ಬುಟ್ಟಿಗೆ ಹಾಕಿದ್ದು ವಚನ ಭ್ರಷ್ಟತೆ ಅಲ್ಲವೇ’ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಅವರು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ ಮಾಡಿ ರುವ ರಾಮುಲು ಅವರು, ‘ವರದಿ ಬಿಡುಗಡೆ ಮಾಡದಂತೆ ನಿಮ್ಮ ಸಂಪುಟದ ಸಹೋದ್ಯೋಗಿಗಳೇ ಒತ್ತಡ ಹಾಕಿ, ಕಾಂತರಾಜು ಅವರ ವರದಿಯನ್ನು ಶೈತ್ಯಾಗಾರಕ್ಕೆ ಹಾಕಿದ್ದು ವಚನ ಭ್ರಷ್ಟತೆ ಅಲ್ಲದೆ ಮತ್ತೇನು? ಇದನ್ನು ಮಾಧ್ಯಮಗಳಲ್ಲಿ ವ್ಯವಸ್ಥಿತವಾಗಿ ಸೋರಿಕೆ ಮಾಡಿ, ಕೊನೆಗೆ ತಮಗೇ ತಿರುಗುಬಾಣವಾದೀತು ಎಂದು ಮುಚ್ಚಿ ಹಾಕಿದ ಪ್ರಖರ ಪಂಡಿತರು ನೀವಲ್ಲವೇ’ ಎಂದಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು