ಬುಧವಾರ, ಸೆಪ್ಟೆಂಬರ್ 29, 2021
20 °C

ಸಿಎಂ ಆಗಿ ಬೊಮ್ಮಾಯಿ ಅಧಿಕಾರ: ಸಾಮಾಜಿಕ ಜಾಲತಾಣಗಳಲ್ಲಿ ಮೀಮ್‌ಗಳ ಅಬ್ಬರ

ಪ್ರಜಾವಾಣಿ ವೆಬ್‌ ಡೆಸ್ಕ್‌ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರು ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ.

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕೂಗು ಜೋರಾಗಿ ಕೇಳಿ ಬರುತ್ತಿದ್ದ ಬೆನ್ನಲ್ಲೇ ಇದೇ 26ರಂದು ಬಿ.ಎಸ್‌.ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ಸರ್ಕಾರ ಎರಡು ವರ್ಷ ಪೂರೈಸಿತು. ಅಂದೇ ಯಡಿಯೂರಪ್ಪನವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು.

ಈ ಹಿನ್ನೆಲೆಯಲ್ಲಿ ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಚರ್ಚೆ ಮುನ್ನೆಲೆಗೆ ಬಂದಿತ್ತು. ಈ ಸಂದರ್ಭದಲ್ಲಿ ಪ್ರಲ್ಹಾದ ಜೋಶಿ, ಅರವಿಂದ್‌ ಬೆಲ್ಲದ್‌, ಸಿ.ಟಿ.ರವಿ. ಮುರುಗೇಶ್‌ ನಿರಾಣಿ ಸೇರಿದಂತೆ ಆಕಾಂಕ್ಷಿಗಳ ದಂಡು ದೊಡ್ಡದ್ದೇ ಇತ್ತು. ಆದರೆ, ಬಿಜೆಪಿ ಹೈಕಮಾಂಡ್‌ ಬಸವರಾಜ ಬೊಮ್ಮಾಯಿ ಅವರಿಗೆ ಮಣೆ ಹಾಕಿದೆ.

ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಆಯ್ಕೆಯಾಗುವ ಮೂಲಕ ಯಡಿಯೂರಪ್ಪ ಅವರು ಮೇಲುಗೈ ಸಾಧಿಸಿದ್ದಾರೆ ಎಂದೇ ವಿಶ್ಲೇಷಿಸಲಾಗುತ್ತಿದೆ. ಈ ಎಲ್ಲ ಬೆಳವಣಿಗೆಗಳ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ಮೀಮ್‌ಗಳು ವೈರಲ್‌ ಆಗಿವೆ.

‘ಬೂಕನಕೆರೆ ಸಿದ್ಧಲಿಂಗಪ್ಪ ಯಡಿಯೂರಪ್ಪ ಆಪ್ತನಾದ ನಾನು... !!, ಇದೀಗ ಹೊಸ ವಿನ್ಯಾಸ ಹಾಗೂ ಹೊಸ ವಿಶ್ವಾಸದೊಂದಿಗೆ ಮತ್ತೊಮ್ಮೆ ನಿಮ್ಮ ಮುಂದೆ!, ಯಡಿಯೂರಪ್ಪ ಅವರ ಮುಖವಾಡ ಹಾಕಿರುವ ಬೊಮ್ಮಾಯಿ’ ಎಂಬ ಮೀಮ್‌ಗಳು ವೈರಲ್‌ ಆಗಿರುವುದು ಗಮನ ಸೆಳೆಯುತ್ತಿವೆ.


ವೈರಲ್‌ ಆಗಿರುವ ಮೀಮ್‌ಗಳು

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು