ಸೋಮವಾರ, ಡಿಸೆಂಬರ್ 6, 2021
25 °C

ಬೊಮ್ಮಾಯಿಯವರೇ, ಖಾಲಿ ಡಬ್ಬ ಅಲ್ಲಾಡಿಸಿ ಸದ್ದು ಮಾಡಿದಿರಲ್ಲವೇ? -ಕಾಂಗ್ರೆಸ್ ಟೀಕೆ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಬ್ಬರದೊಂದಿಗೆ ಘೋಷಿಸಿದ ರೈತ ವಿದ್ಯಾನಿಧಿ ಯೋಜನೆ ಅಡಿಯಲ್ಲಿ ವಿದ್ಯಾರ್ಥಿ ವೇತನಕ್ಕೆ ಪ್ರತ್ಯೇಕ ಅರ್ಜಿ ಹಾಕುವ ವ್ಯವಸ್ಥೆಯೇ ಇಲ್ಲ’ ಎಂದು ಕಾಂಗ್ರೆಸ್‌ ಕಿಡಿಕಾರಿದೆ.

ಈ ವಿಚಾರವಾಗಿ ಟ್ವೀಟ್‌ ಮಾಡಿರುವ ಕಾಂಗ್ರೆಸ್, ‘ಸಿಎಂ ಅಬ್ಬರದೊಂದಿಗೆ ಘೋಷಿಸಿದ ರೈತ ವಿದ್ಯಾನಿಧಿ ಯೋಜನೆಯಡಿ ವಿದ್ಯಾರ್ಥಿ ವೇತನಕ್ಕೆ ಪ್ರತ್ಯೇಕ ಅರ್ಜಿ ಹಾಕುವ ವ್ಯವಸ್ಥೆಯೇ ಇಲ್ಲ. ಸಾಮಾನ್ಯ ವರ್ಗದ ಅರ್ಜಿಗಳನ್ನು ಮಾತ್ರ ಪರಿಗಣಿಸಲಾಗುತ್ತಿದೆ. ಹೀಗಾಗಿ ಇದುವರೆಗೂ ಕೇವಲ 16 ಸಾವಿರ ವಿದ್ಯಾರ್ಥಿಗಳಿಗೆ ಮಾತ್ರ ದೊರಕಿದೆ. ಬೊಮ್ಮಾಯಿಯವರೇ, ಇಂತಹ ಖಾಲಿ ಡಬ್ಬ ಅಲ್ಲಾಡಿಸಿ ಹೆಚ್ಚು ಸದ್ದು ಮಾಡಿದಿರಲ್ಲವೇ? ಎಂದು ಪ್ರಶ್ನಿಸಿದೆ.

ರಾಜ್ಯದ ರೈತ ಕುಟುಂಬಗಳಿಗೆ ಆರ್ಥಿಕ ಬಲ‌ ತುಂಬುವ ಉದ್ದೇಶದಿಂದ ಬಸವರಾಜ ಬೊಮ್ಮಾಯಿ ಅವರು   'ಮುಖ್ಯಮಂತ್ರಿಗಳ ರೈತ ವಿದ್ಯಾ ನಿಧಿ' ಯೋಜನೆಯನ್ನು ಜಾರಿಗೆ ತಂದಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು