ಮಂಗಳವಾರ, ಸೆಪ್ಟೆಂಬರ್ 21, 2021
21 °C

ಕೋವಿಡ್‌ ಕಾಲದಲ್ಲಿ 12,000ಕ್ಕೂ ಹೆಚ್ಚು ಮಂದಿಗೆ ಉದ್ಯೋಗ ಕಲ್ಪಿಸಲಾಗಿದೆ: ಬಿಜೆಪಿ

ಪ್ರಜಾವಾಣಿ ವೆಬ್‌ ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೋವಿಡ್‌ ಸಂಕಷ್ಟದ ಕಾಲದಲ್ಲಿ 12,000ಕ್ಕೂ ಹೆಚ್ಚು ಮಂದಿಗೆ ರಾಜ್ಯ ಸರ್ಕಾರ ಉದ್ಯೋಗ ಕಲ್ಪಿಸಿದೆ ಎಂದು ಬಿಜೆಪಿಯ ರಾಜ್ಯ ಘಟಕದ ಅಧಿಕೃತ ಖಾತೆಯಿಂದ ಟ್ವೀಟ್ ಮಾಡಲಾಗಿದೆ.

‘ಕೋವಿಡ್‌ ಸಂಕಷ್ಟದ ಕಾಲದಲ್ಲಿ ಉದ್ಯೋಗ ವಂಚಿತರಾಗಿದ್ದ ಸುಮಾರು 12 ಸಾವಿರಕ್ಕೂ ಅಧಿಕ ಮಂದಿಗೆ ರಾಜ್ಯ ಬಿಜೆಪಿ ಸರ್ಕಾರ ಉದ್ಯೋಗ ಕಲ್ಪಿಸಿದೆ. ಉದ್ಯೋಗ ಆಧಾರಿತ ತರಬೇತಿ ನೀಡುವ ಮೂಲಕ ಅನೇಕ ಕಂಪನಿಗಳಲ್ಲಿ ಕೆಲಸ ಗಿಟ್ಟಿಸಿಕೊಳ್ಳಲು ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ನೆರವಾಗುತ್ತಿದೆ’ ಎಂದು #ಜನಸ್ನೇಹಿಬಿಜೆಪಿಸರ್ಕಾರ ಎಂಬ ಹ್ಯಾಷ್‌ಟ್ಯಾಗ್‌ನೊಂದಿಗೆ ಟ್ವೀಟ್ ಮಾಡಲಾಗಿದೆ.

ಬಿಜೆಪಿ ಎಂದರೆ ಯೋಜನೆ ಮತ್ತು ಯೋಚನೆ ಇಲ್ಲದ ಗಾಂಪರ ಗುಂಪು ಎಂದು ಕಾಂಗ್ರೆಸ್ ಲೇವಡಿ ಮಾಡಿತ್ತಲ್ಲದೆ, ಉದ್ಯೋಗ ಸೃಷ್ಟಿಯಲ್ಲಿ ರಾಜ್ಯ ಹಿಂದುಳಿದಿದ್ದರೂ ಕ್ರಮವಹಿಸದೆ ಯುವ ಸಮುದಾಯದ ಬದುಕನ್ನು ಕತ್ತಲೆಗೆ ತಳ್ಳಲಾಗುತ್ತಿದೆ ಎಂದು ಆರೋಪಿಸಿತ್ತು.

ಓದಿ: 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು