ಶನಿವಾರ, ಜನವರಿ 23, 2021
18 °C

ಪಕ್ಷ, ಸರ್ಕಾರದ ವಿರುದ್ಧ ಮಾತನಾಡಿದರೆ ಶಿಸ್ತು ಕ್ರಮ: ಸಚಿವ ಆರ್. ಅಶೋಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಎರಡು ದಿನ ನಡೆದ ಶಾಸಕರ ಸಭೆಯಲ್ಲಿ ಎಲ್ಲರೂ ಮುಖ್ಯಮಂತ್ರಿ ಬಳಿ ತಮ್ಮ‌ ಮನದಾಳದ ಅಭಿಪ್ರಾಯ ತಿಳಿಸಿದ್ದಾರೆ.  ಯಡಿಯೂರಪ್ಪ ನಾಯಕತ್ವದ ಬಗ್ಗೆ ಎಲ್ಲರೂ ಬೆಂಬಲ ಕೊಟ್ಟಿದ್ದಾರೆ’ ಎಂದು ಕಂದಾಯ ಸಚಿವ ಆರ್‌. ಅಶೋಕ ಹೇಳಿದರು.

ಸುದ್ದಿಗಾರರ ಜೊತೆ ಬುಧವಾರ ಮಾತನಾಡಿದ ಅವರು, ‘ಯಾವುದೇ ವಿಷಯವನ್ನು ಪಕ್ಷದ ಚೌಕಟ್ಟಿನಲ್ಲಿ ಮಾತನಾಡಬೇಕು. ಯಾರೂ ಕೂಡಾ ಪಕ್ಷ, ಸರ್ಕಾರದ ಬಗ್ಗೆ ಮಾತನಾಡಬಾರದು. ಹಾಗೇನಾದರೂ ಬಹಿರಂಗವಾಗಿ ಮಾತನಾಡಿದರೆ ಶಿಸ್ತು ಕ್ರಮ ಕೈಗೊಳ್ಳುವ ಬಗ್ಗೆ ಕೋರ್‌ ಕಮಿಟಿಯಲ್ಲಿ ತೀರ್ಮಾನ ಆಗಿದೆ’ ಎಂದರು.

ಇದನ್ನೂ ಓದಿ...ನಾನು ಯಾವುದಕ್ಕೂ ಅಂಜುವ ಮಗ ಅಲ್ಲ; ಮತ್ತೆ ಗುಡುಗಿದ ಶಾಸಕ ಯತ್ನಾಳ್

‘ಕಳೆದ ವಾರದಿಂದ ನಡೆದಿರುವ ಬೆಳವಣಿಗೆಗಳ ಸಂಪೂರ್ಣ ವರದಿ ಹೈಕಮಾಂಡ್‌ಗೆ ತಲುಪಿದೆ. ಶಾಸಕರ ಬಗ್ಗೆ ರಾಜ್ಯಮಟ್ಟದಲ್ಲಿ ಶಿಸ್ತು ಕ್ರಮ ಸಾಧ್ಯವಿಲ್ಲ. ಅದೇನಿದ್ದರೂ ಪಕ್ಷದ ರಾಷ್ಟ್ರೀಯ ಘಟಕ ಕ್ರಮಕೈಗೊಳ್ಳಬೇಕು’ ಎಂದೂ ಅಶೋಕ ಹೇಳಿದರು.

ಇದನ್ನೂ ಓದಿ...ಬಿಎಸ್‌ವೈ ತಂದೆ ಸಮಾನ, ಪಕ್ಷ ತಾಯಿ ಸಮಾನ; ಯತ್ನಾಳ ವಿರುದ್ಧ ರೇಣುಕಾಚಾರ್ಯ ಗರಂ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು