ಬೆಂಗಳೂರು: ಬಿಜೆಪಿಯವರು ‘ಜೈ ಶ್ರೀರಾಮ್’ ಎಂದರೆ ಸ್ವತಃ ರಾಮನೇ ಅಸಹ್ಯಪಟ್ಟುಕೊಳ್ಳುತ್ತಾನೆ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಬಿಜೆಪಿಗರು ‘ಜೈ ಶ್ರೀರಾಮ್’ ಎಂದರೆ ಸ್ವತಃ ರಾಮನೇ ಅಸಹ್ಯಪಟ್ಟುಕೊಳ್ಳುತ್ತಾನೆ. ರಾಮನ ಹೆಸರಲ್ಲಿ ಬಿಜೆಪಿ ಸರ್ಕಾರ ಮಾಡಬಾರದ್ದೆಲ್ಲವನ್ನೂ ಮಾಡುತ್ತಿದೆ. ಪ್ರಸಾದ್ ಅತ್ತಾವರ ಎನ್ನುವ ಬಿಜೆಪಿ ಮುಖಂಡನ ವಂಚನೆ ಜಾಲ ಬಯಲಾಗಿದೆ. ಪ್ರಾಧ್ಯಾಪಕರಿಗೆ ಕುಲಪತಿ ಹುದ್ದೆ ಕೊಡಿಸುವುದಾಗಿ ₹17 ಲಕ್ಷ ಪಡೆದು ವಂಚಿಸಿದ್ದಾನೆ. ರಾಮ ಬಿಜೆಪಿಯನ್ನು ಕ್ಷಮಿಸುವುದಿಲ್ಲ’ ಎಂದು ವ್ಯಂಗ್ಯವಾಡಿದೆ.

‘ರಾಮನೆಂದರೆ ಹಿಂದೂಗಳಿಗೆ ಧ್ಯಾನ, ಭಕ್ತಿ, ಶ್ರದ್ಧೆ. ಸಮಸ್ತ ಹಿಂದುಗಳ ಭಾವನೆ ಗೌರವಿಸಿ ಬಿಜೆಪಿ ಸರ್ಕಾರ ಇನ್ನು ಮುಂದೆ ರಾಮನ ಹೆಸರು ಹೇಳುವುದನ್ನು ನಿಲ್ಲಿಸಬೇಕು. ರಾಜಕೀಯ, ಕೊಲೆ, ಸುಲಿಗೆ, ಹಿಂಸೆ, ವಂಚನೆ ಮುಂತಾದ ಅಧರ್ಮಗಳು ತನ್ನ ಹೆಸರಲ್ಲಿ ಮಾಡುವುದನ್ನ ರಾಮ ಸಹಿಸುವುದಿಲ್ಲ, ರಾಮನ ನಿಜ ಭಕ್ತರೂ ಸಹಿಸುವುದಿಲ್ಲ’ ಎಂದು ಕಾಂಗ್ರೆಸ್ ಮತ್ತೊಂದು ಟ್ವೀಟ್ ಮಾಡಿದೆ.

ಇದನ್ನೂ ಓದಿ... ಡಿಕೆಶಿಗೆ ಸಿಕ್ಕಿ ಬೀಳುವ ಮುನ್ಸೂಚನೆ ಮೊದಲೇ ಗೊತ್ತಾಗಿದ್ದು ಹೇಗೆ?: ಬಿಜೆಪಿ

‘ಭ್ರಷ್ಟಾಚಾರದ ಕೂಪವಾಗಿರುವ ಬಿಜೆಪಿ ಸರ್ಕಾರದಲ್ಲಿ ರಾಮನ ಹೆಸರನ್ನು ವಂಚನೆಗೆ, ಕುಕೃತ್ಯಗಳಿಗೆ ಪರವಾನಿಗೆಯಂತೆ ಉಪಯೋಗಿಸಿಕೊಳ್ಳಲಾಗುತ್ತಿದೆ. ನಳಿನ್ ಕುಮಾರ್ ಕಟೀಲ್ ಅವರೇ, ವಂಚಕ ಪ್ರಸಾದ್ ಅತ್ತಾವರನ ಲೂಟಿಯಲ್ಲಿ ನಿಮ್ಮದೆಷ್ಟು ಪಾಲು? ವರ್ಗಾವಣೆ, ನೇಮಕಾತಿ, ಅನುದಾನ ಬಿಡುಗಡೆ, ನೆರೆ ಪರಿಹಾರ ವಿತರಣೆ ಎಲ್ಲದರಲ್ಲೂ ಬಿಜೆಪಿ ಲೂಟಿಗೆ ಇಳಿದಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.