ಶುಕ್ರವಾರ, ಡಿಸೆಂಬರ್ 9, 2022
21 °C

ಪಿಎಫ್‌ಐ ನಿಷೇಧ: ಡಿಕೆಶಿ, ಸಿದ್ದರಾಮಯ್ಯ ಬಾಯಿ ತೆರೆದಿಲ್ಲ ಏಕೆ –ಬಿಜೆಪಿ ಪ್ರಶ್ನೆ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ನವದೆಹಲಿ: ದೇಶದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆಯನ್ನು ನಿಷೇಧಿಸಿರುವ ಕೇಂದ್ರ ಸರ್ಕಾರದ ಆದೇಶ ಬಿಜೆಪಿ –ಕಾಂಗ್ರೆಸ್‌ ನಡುವೆ ರಾಜಕೀಯ ತಿರುವು ಪಡೆದುಕೊಂಡಿದೆ. 

ಪಿಎಫ್‌ಐ ನಿಷೇಧ ವಿಚಾರವನ್ನು ಪ್ರಸ್ತಾಪಿಸಿ ಟ್ವೀಟ್‌ ಮಾಡಿರುವ ಬಿಜೆಪಿ, ‘ಪಿಎಫ್‌ಐ ಸೇರಿದಂತೆ ಅದರ ಸಹವರ್ತಿ ಸಂಘಟನೆಗಳು ಮಾಡುತ್ತಿದ್ದ ಎಲ್ಲಾ ದೇಶ ವಿರೋಧಿ ಚಟುವಟಿಕೆಗಳಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಪಕ್ಷ (ಕಾಂಗ್ರೆಸ್) ಬೆಂಗಾವಲಾಗಿ ನಿಂತಿತ್ತು ಎಂದು ಆರೋಪಿಸಿದೆ. 

ಪಿಎಫ್‌ಐ ನಿಷೇಧದ ಕುರಿತು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಏಕೆ ಇನ್ನೂ ಬಾಯಿ ತೆರೆದಿಲ್ಲ?, ಮತ ಬ್ಯಾಂಕ್‌ ಕಳೆದುಕೊಳ್ಳುವ ಭಯವೇ ಎಂದು ಬಿಜೆಪಿ ಟೀಕಿಸಿದೆ. 

ಮಾನ್ಯ ಸಿದ್ದರಾಮಯ್ಯ ಅವರೇ, ನಾವು ನುಡಿದಂತೆ ನಡೆದಿದ್ದೇವೆ. ನೀವು ‘ಉಗ್ರಭಾಗ್ಯ’ ಯೋಜನೆಯಡಿ ಸಾಕಿದ ರಣಹದ್ದುಗಳನ್ನು ಬೇಟೆಯಾಡಿದ್ದೇವೆ ಎಂದು ಬಿಜೆಪಿ ಗುಡುಗಿದೆ.

‘ದೇಶದ ಆಂತರಿಕ ಭದ್ರತೆಗೆ ಸವಾಲೆಸೆದಿದ್ದ ಪಿಎಫ್‌ಐ ಮತ್ತು ಅದರ ಸಹವರ್ತಿ ಸಂಘಟನೆಗಳನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮುಂದಿನ 5 ವರ್ಷಗಳ ಅವಧಿಗೆ ನಿಷೇಧ ಮಾಡಿದೆ. ಮೋದಿ ಸರ್ಕಾರದ ಈ ನಿರ್ಧಾರ ಅತ್ಯಂತ ಸ್ವಾಗತಾರ್ಹ. ಮತಾಂಧ ಶಕ್ತಿಗಳ ವಿರುದ್ಧ ಸಮರ ಮುಂದುವರೆಯಲಿದೆ’ ಎಂದು ಬಿಜೆಪಿ ಟ್ವೀಟ್ ಮಾಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು